ಭಾರತ್ ಜೋಡೋ ಪೂರ್ವಭಾವಿ ಸಭೆ 
ರಾಜಕೀಯ

ಬಿಜೆಪಿ ನಾಯಕರುಗಳಿಗೆ 'ಗಾಂಧಿ' ಗಳೆಂದರೆ ನಡುಕ; ಅಕ್ಟೋಬರ್ 2ರಂದು ಮೈಸೂರಿಗೆ ಪ್ರಿಯಾಂಕಾ ಗಾಂಧಿ: ಡಿಕೆ ಶಿವಕುಮಾರ್

ಬಿಜೆಪಿ ನಾಯಕರುಗಳಿಗೆ ಗಾಂಧಿ ಕುಟುಂಬ ಕಂಡರೆ ಭಯ ಹೀಗಾಗಿ ಅವರಿಗೆ ಕಿರುಕುಳ ನೀಡುವುದನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಮೈಸೂರು: ಬಿಜೆಪಿ ನಾಯಕರುಗಳಿಗೆ ಗಾಂಧಿಕುಟುಂಬ ಕಂಡರೆ ಭಯ ಹೀಗಾಗಿ ಅವರಿಗೆ ಕಿರುಕುಳ ನೀಡುವುದನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಭಾರತ್ ಜೋಡೋ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಪ್ರಾಬಲ್ಯ ಪಡೆಯುತ್ತಿದ್ದು ಕೇಸರಿ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯುವುದಾಗಿ ಹೇಳಿದ್ದಾರೆ.

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ವಯನಾಡು ಸಂಸದ ರಾಹುಲ್ ಗಾಂಧಿ ಅವರು ಬಿಜೆಪಿಯವರು ತಮ್ಮ ವಿರುದ್ಧ ಹೊರಿಸಿರುವ ಆರೋಪಗಳ ಬಗ್ಗೆ ಚಿಂತಿಸುತ್ತಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರಿಂದ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಂತೆ ಜೈಲಿಗೆ ಹೋಗಲು ಸಿದ್ಧರಾಗಿದ್ದಾರೆ. ಜೈಲಿನಲ್ಲಿನ ಅನುಭವದ ಬಗ್ಗೆ ರಾಹುಲ್ ಕೇಳಿದ್ದು, ಜೈಲಿಗೆ ಹೋಗಲು ನನಗೆ ಭಯವಿಲ್ಲ ಎಂದು ಹೇಳಿದ್ದಾರೆ ಎಂದು ಶಿವಕುಮಾರ್ ಹೇಳಿದ್ದಾರೆ.

ಅಕ್ಟೋಬರ್ 2 ರಂದು ಮೈಸೂರಿನಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಹುಲ್ ಜೊತೆಗೂಡಲಿದ್ದಾರೆ ಎಂದು ಅವರು ಸುಳಿವು ನೀಡಿದರು.

ದಾವಣಗೆರೆಯಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆ (ಸಿದ್ದರಾಮೋತ್ಸವ) ಯಶಸ್ಸನ್ನು ಉಲ್ಲೇಖಿಸಿದ ಅವರು, “ಜನರು ಸಾವಿರಾರು ಬಸ್‌ಗಳಲ್ಲಿ ಸ್ಥಳಕ್ಕೆ ತಲುಪಿದರು. ನಮ್ಮ ಮೇಕೆದಾಟು ಪಾದಯಾತ್ರೆಗೆ ಭಾರೀ ಬೆಂಬಲ ವ್ಯಕ್ತವಾಗಿತ್ತು ಎಂದರು.

ಈ ಎಲ್ಲಾ ಕಾರ್ಯಕ್ರಮಗಳು ಬಿಜೆಪಿಯನ್ನು ಬೆಚ್ಚಿಬೀಳಿಸಿದೆ. ಭಾರತ್ ಜೋಡೋ ಯಾತ್ರೆಗೆ ಕಡಿಮೆ ಜನರು ಬಂದರೆ ಸಿದ್ದರಾಮಯ್ಯ ಮತ್ತು ನನಗೆ ಅವಮಾನ ಮಾಡಿದಂತಾಗುತ್ತದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಮೈಸೂರು ನಗರದ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರು ಬೆಳಗ್ಗೆ ಕಾರ್ಯಕರ್ತರು, ನಾಗರಿಕ ಸಮಾಜ ಬಾಂಧವರು, ವಿದ್ಯಾರ್ಥಿಗಳು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಪಣ ತೊಡಬೇಕು ಎಂದರು. ಮೈಸೂರಿನಿಂದ ಶ್ರೀರಂಗಪಟ್ಟಣದವರೆಗೆ ರಾಹುಲ್  ಗಾಂಧಿ ಅವರೊಂದಿಗೆ 25,000 ಜನರು ಜೊತೆಗೂಡಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.

ಬಿಜೆಪಿ ಕರ್ನಾಟಕವನ್ನು ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದೆ ಎಂದು ಆರೋಪಿಸಿದರು. ಡಿಕೆ ಶಿವಕುಮಾರ್ ಜ್ವರದಿಂದ ಬಳಲುತ್ತಿದ್ದು. ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್  ಕೂಡ ಅನಾರೋಗ್ಯಕ್ಕೀಡಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT