ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

'ಕಳ್ಳನ ಮನಸು ಹುಳ್ಳುಳ್ಳಗೆ' ಎಂಬ ಮಾತು ನಿಜವೇ! ಸಿಎಂ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ

ಪೇ ಸಿಎಂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸುತ್ತಿದೆ.

ಬೆಂಗಳೂರು: ಪೇ ಸಿಎಂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸುತ್ತಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಪೇ ಸಿಎಂ ಎಂದಾಕ್ಷಣ ಗಾಬರಿಯಿಂದ ಬಸವರಾಜ ಬೊಮ್ಮಾಯಿ ಅವರು ಹೆಗಲು ಮುಟ್ಟಿಕೊಳ್ಳುವುದೇಕೆ, 'ಕಳ್ಳನ ಮನಸು ಹುಳ್ಳುಳ್ಳಗೆ' ಎಂಬ ಮಾತು ನಿಜವೇ ಎಂದು ಕೇಳಿದೆ.

ಪಿಎಸ್ ಐ ಹುದ್ದೆಗಳು 80 ಲಕ್ಷಕ್ಕೆ ಮಾರಾಟವಾಗಿದ್ದರೂ ಹಗರಣ ನಿರಾಕರಿಸಿದ್ರಿ, ಬಸವರಾಜ ದಡೇಸಗೂರ ಹಾಗೂ ಅಶ್ವತ್ಥ ನಾರಾಯಣ್ ಅವರ ವಿಚಾರಣೆ ನಡೆಸಲೇ ಇಲ್ಲ. ಪೆಮೆಂಟ್ ಪಾಲು ನಿಮಗೂ ತಲುಪಿದೆಯೇ ಎಂದು ಪ್ರಶ್ನಿಸಿದೆ.

ಬಿಜೆಪಿಗೆ ಸರ್ಕಾರವೆಂದರೆ ಬಿಸ್ನೆಸ್ ಇದ್ದ ಹಾಗೆ. ಶಾಸಕರ ಖರೀದಿಗೆ ಬಂಡವಾಳ ಹೂಡಿಕೆಯಾಗುತ್ತದೆ. ನಂತರ ಸಿಎಂ ಹುದ್ದೆಗೆ 2,500 ಕೋಟಿ ಪೇ ಸಿಎಂ ಮಾಡ್ಬೇಕು.ಶಾಸಕರು ಸಚಿವ ಸ್ಥಾನಕ್ಕೆ ಪೇ ಸಿಎಂ ಮಾಡ್ಬೇಕು. ಉದ್ಯೋಗಾಕಾಂಕ್ಷಿಗಳು ಸಚಿವರಿಗೆ ಪೇ ಸಿಎಂ ಮಾಡ್ಬೇಕು, ಟೆಂಡರ್ ಸಿಗಬೇಕಾದರೆ, ಬಿಲ್ ಬಿಡುಗಡೆ ಆಗಬೇಕಾದರೆ ಗುತ್ತಿಗೆದಾರರು ಪೇ ಸಿಎಂ ಮಾಡಬೇಕು ಎಂದು ಆರೋಪಿಸಿದೆ. 

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 50 ಲಕ್ಷ ಫಿಕ್ಸ್ , ಈ ಕಡೆಯಿಂದ ಪೇ ಸಿಎಂ ಮಾಡಿ, ಆ ಕಡೆಯಿಂದ ಹುದ್ದೆ ಪಡೆಯಿರಿ, ಈ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ಹಿಂಜರಿಯುತ್ತಿರುವುದೇಕೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!