ಕುಮಾರಸ್ನಾಮಿ 
ರಾಜಕೀಯ

ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ಸತ್ಯಾಂಶ ಬಹಿರಂಗಪಡಿಸಿ - ಕುಮಾರಸ್ವಾಮಿ ಆಗ್ರಹ

ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಆ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

ಬೆಂಗಳೂರು: ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಆ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯ ಸರಕಾರದ ಮೇಲೆ ಅನೇಕ ಆರೋಪಗಳಿವೆ. ನಾನು ಸ್ವತಃ ಬಿಎಂಎಸ್ ಶಿಕ್ಷಣ ಟ್ರಸ್ಟ್ ನಲ್ಲಿ ನಡೆದಿರುವ ಅಕ್ರಮ ಬಗ್ಗೆ ಸದನದಲ್ಲಿಯೇ ದಾಖಲೆಗಳ ಸಮೇತ ಮಾಹಿತಿ ನೀಡಿದ್ದೆ. ಇದಲ್ಲದೆ ಅನೇಕ ಹಗರಣ, ಅಕ್ರಮಗಳ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಒಂದು ವೇಳೆ ಪಿಎಫ್ಐ ಮೇಲೆ ನಡೆದಿರುವ ದಾಳಿ ಕುರಿತು ನೈಜ ಮಾಹಿತಿ ಕೊಡದಿದ್ದರೆ ಆರೋಪ ಮತ್ತು ಹಗರಣಗಳ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಈ ದಾಳಿ ನಡೆಸಲಾಗಿದೆ ಎಂದು ಭಾವಿಸಬೇಕಾಗುತ್ತದೆ ಎಂದಿದ್ದಾರೆ.

ಎರಡು ದಿನಗಳಿಂದ ಕರ್ನಾಟಕವೂ ಸೇರಿ ರಾಷ್ಟ್ರಮಟ್ಟದಲ್ಲಿ ಪಿಎಫ್ಐ ಮೇಲೆ NIA ನಿಂದ ದಾಳಿ ಆಗಿತ್ತು. ಆ ದಾಳಿ ಸಮಯದಲ್ಲಿ ಪಿಎಫ್ಐ ಸಂಘಟನೆಗಳ ವ್ಯಕ್ತಿಗಳ ಬಂಧನವೂ ಆಗಿತ್ತು. ಮತ್ತೆ ಕಳೆದ ರಾತ್ರಿ ರಾಜ್ಯದ ನಾನಾ ಭಾಗದಲ್ಲಿ ಮಧ್ಯರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದರು.

ರಾಜ್ಯ ಪೊಲೀಸರು ನಡೆಸಿದ ದಾಳಿಯಲ್ಲಿ ಸಂಘಟನೆಯ ಕಾರ್ಯಕರ್ತರು, ಜಿಲ್ಲಾ ಅಧ್ಯಕ್ಷರ‌ ಬಂಧನವಾಗಿದೆ. ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ಎನ್ನುವುದು ಸರಕಾರದ ಆದೇಶವೋ ಅಥವಾ ಪೊಲೀಸರ ಮಾಹಿತಿ ಆಧಾರದ ದಾಳಿಯೋ ಗೊತ್ತಿಲ್ಲ. ಆದರೆ ಕಾರ್ಯಾಚರಣೆ ಬಗ್ಗೆ ನಾಡಿನ ಜನರ ಮುಂದೆ ನಿಜವಾದ ವಾಸ್ತವವಾದ ಅಂಶಗಳನ್ನು ಸರಕಾರ ಇಡಬೇಕು ಎಂದು ಅವರು ಆಗ್ರಹಪಡಿಸಿದರು.

ಏಕಾಏಕಿ ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಯಾವುದೇ ಸಮಾಜದ ಮೇಲೆ ಅತಂಕ, ಭಯ ಸೃಷ್ಟಿ ಆಗಬಾರದು. ಇತ್ತೀಚೆಗೆ ಅನೇಕ ಸಂಘಟನೆಗಳು ತಮ್ಮ ಅಜೆಂಡಾ ಪೂರೈಸಲು ಕೆಲಸ ಮಾಡುತ್ತಿವೆ. ಅವುಗಳಿಗೆ ಅರ್ಥಿಕ ಶಕ್ತಿ ಹೇಗೆ ಬರ್ತಿದೆ? ಕೆಲ ಘಟನೆಗಳ ಹಿಂದೆ ಯಾವ ಸಂಘಟನೆಗಳಿವೆ ಎನ್ನುವುದನ್ನು ತನಿಖೆಯಿಂದ ಹೊರಬರಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಳೆದ ರಾತ್ರಿ ಏಕಾಏಕಿ ದಾಳಿ ಆಗಿರೋದು‌ ಸಣ್ಣ ಪುಟ್ಟ ಕಾರ್ಯಕರ್ತರಿಗೆ ಆತಂಕ ಉಂಟು ಮಾಡಿದೆ ಎನ್ನುವುದು ನಿಜ. ಈ ದಾಳಿಯ ವೇಳೆ ಏನು ಸಿಕ್ಕಿದೆ. ಯಾವ ದಾಖಲೆ ಇದೆ  ಎಂಬುದನ್ನು ಜನರ ಮುಂದೆ ಇಡಬೇಕು. ದಾಳಿಯ ಬಗ್ಗೆ ಸತ್ಯ ಹೇಳದೇ ಹೋದರೆ ಕಾಂಗ್ರೆಸ್ ನ ಪೇ‌ ಸಿಎಂ ಅಭಿಯಾನ ಡೈವರ್ಟ್ ಮಾಡೋಕೆ ಸರಕಾರ ಹೀಗೆ ಮಾಡಿದೆ ಎಂಬ ಅನುಮಾನ ಜನರಿಗೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ