ನಳೀನ್ ಕುಮಾರ್ ಕಟೀಲ್ 
ರಾಜಕೀಯ

ಬೆಳಗಾವಿ: ರಮೇಶ್ ಜಾರಕಿಹೊಳಿ ನಾಯಕತ್ವದಲ್ಲಿ 18 ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸಲು ಬಿಜೆಪಿ ಒಲವು

ಸಿಡಿ ಕೇಸ್ ನಲ್ಲಿ ಆರೋಪದಿಂದ ಹೊರಬರಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಹೋರಾಟ ನಡೆಸುತ್ತಿರುವಂತೆಯೇ, ಅವರ ನಾಯಕತ್ವದಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಎದುರಿಸಲು ಬಿಜೆಪಿ ಎದುರು ನೋಡುತ್ತಿದೆ.

ಬೆಳಗಾವಿ: ಸಿಡಿ ಕೇಸ್ ನಲ್ಲಿ ಆರೋಪದಿಂದ ಹೊರಬರಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಹೋರಾಟ ನಡೆಸುತ್ತಿರುವಂತೆಯೇ, ಅವರ ನಾಯಕತ್ವದಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಎದುರಿಸಲು ಬಿಜೆಪಿ ಎದುರು ನೋಡುತ್ತಿದೆ.

ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಾರಕಿಹೊಳಿ ನಾಯಕತ್ವದಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಜಾರಕಿಹೊಳಿ ಖಂಡಿತವಾಗಿಯೂ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಾರೆ. ಆದರೆ, ಯಾವಾಗ ಅವರನ್ನು ಸಂಪುಟಕ್ಕೆ ಸೇರ್ಪಡೆ ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ ಎಂದರು.

ಜಾರಕಿಹೊಳಿ 16 ಇತರ ಶಾಸಕರೊಂದಿಗೆ ಬಿಜೆಪಿ ಸೇರುವುದರೊಂದಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ನೆರವಾದರು. ತದನಂತರ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ರಾಜ್ಯದಲ್ಲಿ ತ್ವರಿತಗತಿಯಲ್ಲಿ ಅಭಿವೃದ್ಧಿಯ ಕೆಲಸಗಳಾಗಿವೆ ಎಂದು ಅವರು ಹೇಳಿದರು. 

ದೇಶದಲ್ಲಿ ಪಿಎಫ್ ಐ ಸಂಘಟನೆ ಬ್ಯಾನ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಕಟೀಲ್, ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬೇಕಾಗಿದೆ. ಈ ಹಿಂದೆ ಪಿಎಫ್ ಐ, ಎಸ್ ಡಿಪಿಐ ನಂತಹ ಸಂಘಟನೆಗಳನ್ನು ಕಾಂಗ್ರೆಸ್ ಪಕ್ಷ ಪ್ರೋತ್ಸಾಹಿಸಿದೆ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಅಧಿಕಾರದಲ್ಲಿ ಉಳಿದರೆ ದೇಶ ನಾಶವಾಗಲಿದೆ ಎಂಬುದನ್ನು ಮಹಾತ್ಮ ಗಾಂಧಿ ಅರಿತಿದ್ದರು. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ವಿಭಜನೆಯನ್ನು ಅವರು ಬಯಸಿದ್ದರು ಎಂದರು. 

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರೇಡ್ ಕುರಿತಂತೆ ಪ್ರತಿಕ್ರಿಯಿಸಿದ ಕಟೀಲ್, ಅನೇಕ ವ್ಯಕ್ತಿಗಳ ವಿರುದ್ಧ ದಾಳಿ ನಡೆದಿದೆ. ಆದರೆ, ಪ್ರಾಮಾಣಿಕರಾಗಿರುವವರು ದಾಳಿಗೆ ಭಯಪಡಬೇಕಾದ ಅಗತ್ಯವಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ಅನೇಕ ಮುಖಂಡರ ಮನೆಗಳ ಮೇಲೆ ದಾಳಿ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ 9 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಅಮಿತ್ ಶಾ ಜೈಲಿಗೂ ಹೋಗಿ ಬಂದಿದ್ದಾರೆ. ಕಾಂಗ್ರೆಸ್ ಅಧಿಕಾರದ ಸಂದರ್ಭದಲ್ಲಿ ಬಿಜೆಪಿ ಮುಖಂಡರ ವಿಚಾರಣೆ ಸಂದರ್ಭದಲ್ಲಿ ಪಕ್ಷ ಯಾವತ್ತೂ ಕೂಡಾ ಪ್ರತಿಭಟನೆ ನಡೆಸಲಿಲ್ಲ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

SCROLL FOR NEXT