ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ಹಾಸನ ಸೇರಿ ಉಳಿದ ಎಲ್ಲಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸೋಮವಾರ ಬಿಡುಗಡೆ: ಹೆಚ್ ಡಿ ಕುಮಾರಸ್ವಾಮಿ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಂತೆ ಜೆಡಿಎಸ್ ಅಭ್ಯರ್ಥಿಗಳು ಯಾರ್ಯಾರು ಎಂಬುದು ಹಲವು ಕ್ಷೇತ್ರಗಳಲ್ಲಿ ಕುತೂಹಲಕರವಾಗಿರುತ್ತರೆ. ಇಂದು ಏಪ್ರಿಲ್ 1ರಂದು ಸಂಜೆ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಂತೆ ಜೆಡಿಎಸ್ ಅಭ್ಯರ್ಥಿಗಳು ಯಾರ್ಯಾರು ಎಂಬುದು ಹಲವು ಕ್ಷೇತ್ರಗಳಲ್ಲಿ ಕುತೂಹಲಕರವಾಗಿರುತ್ತರೆ. ಇಂದು ಏಪ್ರಿಲ್ 1ರಂದು ಸಂಜೆ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಇಂದು ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳುವ ಪ್ರಕಾರ ಸೋಮವಾರ ಬೆಳಗ್ಗೆ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. 

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಗೊಂದಲದಲ್ಲಿರುವ ಹಾಸನ ಕ್ಷೇತ್ರ ಸೇರಿ ಉಳಿದ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮುಂದಿನ ಸೋಮವಾರ ಬೆಳಗ್ಗೆ ಬಿಡುಗಡೆ ಮಾಡುತ್ತೇವೆ. ಹಾಸನ ಕ್ಷೇತ್ರದ ಬಂಡಾಯಕ್ಕೆ ಸೊಪ್ಪು ಹಾಕುವ ಪ್ರಶ್ನೆಯೇ ಇಲ್ಲ, ನಮ್ಮ ಪಕ್ಷದಲ್ಲಿ ಕಾರ್ಯಕರ್ತರ ಭಾವನೆಗಳು ಮುಖ್ಯ, ಕಾರ್ಯಕರ್ತರಿಗೆ ಯಾವುದೇ ರೀತಿಯಲ್ಲಿ ನೋವುಂಟುಮಾಡುವುದಿಲ್ಲ ಎಂದಿದ್ದಾರೆ. 

ಇಂದಿನಿಂದ ವಿವಿಧೆಡೆ ಪ್ರಚಾರ: ಇಂದಿನಿಂದ ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ನಡೆಸಲಾಗುವುದು. ಚಾಮರಾಜನಗರ, ಮೈಸೂರು, ಬಳ್ಳಾರಿ, ಹುಬ್ಬಳ್ಳಿ, ಧಾರವಾಡದಲ್ಲಿ ಏಪ್ರಿಲ್ 12ರವರೆಗೆ ಪ್ರಚಾರ ನಡೆಸಲಾಗುವುದು. ಏಪ್ರಿಲ್ 13ರಿಂದ ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಕೆಗೆ ಹಲವು ಕ್ಷೇತ್ರಗಳಿಗೆ ಭೇಟಿ ನೀಡಲಾಗುವುದು. ಏಪ್ರಿಲ್ 21ರಿಂದ ಏಪ್ರಿಲ್ 24ರವರೆಗೆ ರಾಮನಗರ, ಚನ್ನಪಟ್ಟಣ, ಕನಕಪುರದಲ್ಲಿ ಪ್ರಚಾರ ಮಾಡುತ್ತೇನೆ. ಎಲ್ಲಿಯೂ ಸಮಯ ವ್ಯರ್ಥ ಮಾಡುವುದಿಲ್ಲ. ಇನ್ನು, ಸಮೀಕ್ಷೆ ವರದಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಗುರಿ ತಲುಪುವುದಕ್ಕೆ ಬೇಕಾದ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT