ಸಭೆಯಲ್ಲಿ ಕೈ ಕೈ ಮಿಲಾಯಿಸಿರುವ ಕಾಂಗ್ರೆಸ್ ಕಾರ್ಯಕರ್ತರು. 
ರಾಜಕೀಯ

ಚಿಕ್ಕಮಗಳೂರು: ಕಾಂಗ್ರೆಸ್‌ ಸಭೆಯಲ್ಲಿ ಕೈಕೈ ಮಿಲಾಯಿಸಿದ ಕಾರ್ಯಕರ್ತರು, ಆಂತರಿಕ ಬಿಕ್ಕಟ್ಟು ಸ್ಫೋಟ

ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡ ಎಚ್‌.ಡಿ.ತಮ್ಮಯ್ಯಗೆ ಟಿಕೆಟ್‌ ನೀಡಬಾರದು ಎಂದು ಹಲವು ಮುಖಂಡರು ಧ್ವನಿ ಎತ್ತಿ ಆಕ್ರೋಶ ವ್ಯಕ್ತಪಡಿಸಿದ ಮತ್ತು ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದ ಘಟನೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ನಡೆಯಿತು.

ಚಿಕ್ಕಮಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡ ಎಚ್‌.ಡಿ.ತಮ್ಮಯ್ಯಗೆ ಟಿಕೆಟ್‌ ನೀಡಬಾರದು ಎಂದು ಹಲವು ಮುಖಂಡರು ಧ್ವನಿ ಎತ್ತಿ ಆಕ್ರೋಶ ವ್ಯಕ್ತಪಡಿಸಿದ ಮತ್ತು ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದ ಘಟನೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ನಡೆಯಿತು.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಪಕ್ಷದ ಟಿಕೆಟ್ ಹಂಚಿಕೆ ವಿಚಾರವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಅವರು ಸಭೆ ಕರೆದಿದ್ದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪದವೀಧರರ ಮತ್ತು ಶಿಕ್ಷಕರ ಘಟಕದ ಅಧ್ಯಕ್ಷ ಜಿ.ಬಿ.ಪವನ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಈ ಸಂದರ್ಭದಲ್ಲಿ ಟಿಕೆಟ್ ಆಕಾಂಕ್ಷಿಗಳಾದ ಡಿ.ಎಲ್.ವಿಜಯಕುಮಾರ್, ಎ.ಎನ್.ಮಹೇಶ್, ಮಹಡಿಮನೆ ಸತೀಶ್, ಹರೀಶ್, ಸಿ.ಎನ್.ಅಕ್ಮಲ್ ವೇದಿಕೆಯಲ್ಲಿದ್ದರು. ಮಂಜೇಗೌಡ ಅವರು ಚರ್ಚೆಯನ್ನು ಆರಂಭಿಸಿ, ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಹೈಕಮಾಂಡ್ ಆಯ್ಕೆ ಮಾಡಿರುವ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದರು.
 
ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪವನ್, ಯಾರಿಗಾದರೂ ಎಂದರೆ, ಇತ್ತೀಚೆಗೆ ಪಕ್ಷಾಂತರ ಮಾಡಿರುವವರಿಗೆ ಅಲ್ಲ. ಹಲವು ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡಿರುವ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಎಂದು ಹೇಳಬೇಕೆಂದು ಮಂಜೇಗೌಡರಿಗೆ ಹೇಳಿದರು. ಈ ವೇಳೆ ಕಾಂಗ್ರೆಸ್'ನ ಹಲವು ಕಾರ್ಯಕರ್ತರು ಪವನ್ ವಿರುದ್ಧ ಮುಗಿಬಿದ್ದು ಹಲ್ಲೆ ನಡೆಸಿದರು. ಸ್ಥಳದಲ್ಲಿಯೇ ಇದ್ದ ಟಿಕೆಟ್ ಆಕಾಂಕ್ಷಿ ಮಹಡಿಮನೆ ಸತೀಶ್ ಹಾಗೂ ಅವರ ಬೆಂಬಲಿಗರು ಪವನ್ ಅವರನ್ನು ರಕ್ಷಿಸಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಹೆಚ್.ಡಿ.ತಮ್ಮಯ್ಯ ಅವರಿಗೆ ಟಿಕೆಟ್ ನೀಡಬಾರದೆಂದು ಕೆಲವು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೈಗೆ ಸಿಕ್ಕ ಚೇರ್ ಗಳನ್ನು ಎತ್ತಿಹಾಕಿ, ಕಾಲಿಂದ ಒದ್ದು, ಏಕವಚನದಲ್ಲಿ ಬೇದಾಡಿ ಪಕ್ಷದ ಕಚೇರಿಯಿಂದ ಹೊರಗೆ ನಡೆದರು. ಗೊಂದಲ ಕೋಲಾಹಲದ ಪರಿಸ್ಥಿತಿ ಬಹಳ ಸಮಯದವರೆಗೆ ಮುಂದುವರೆದಿತ್ತು. ಮೂಲ ಕಾಂಗ್ರೆಸ್ಸಿಗರು, ಪಕ್ಷದಲ್ಲಿ ಸುಮಾರು 3-4 ದಶಕಗಳಿಂದ ದುಡಿದ ಮುಖಂಡರು, ಜಿಲ್ಲಾ ಕಾಂಗ್ರೆಸ್'ನ ಮಾಜಿ ಅಧ್ಯಕ್ಷಕರು, ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷಕು ಮೂಖ ಪ್ರೇಕ್ಷಕರಂತೆ ನಿಂತು ನೋಡುತ್ತಿದ್ದರು.

ಸಭೆ ಆರಂಭದಿಂದ ಮುಖಂಡರು ಮಾತನಾಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಉದ್ದೇಶ ಪೂರ್ವಕವಾಗಿ ಅಡ್ಡಿಪಡಿಸಿದ್ದಾರೆಂದು ಕಾರ್ಯಕರ್ತರು ಅಸಮಾಧಾನ ಹೊರಹಾಕಿದರು.

ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ: ಜಿಲ್ಲಾ ಕಾಂಗ್ರೆಸ್ ಮುಖ್ಯಸ್ಥ
ಪಕ್ಷದ ಕಾರ್ಯಕರ್ತರ ನಡುವೆಯಷ್ಟೇ ಮಾತಿನ ಚಕಮಕಿ ನಡೆದಿದೆ. ಇದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಇಂತಹ ಬೆಳವಣಿಗೆಗಳು ಕಂಡು ಬರುವುದು ಸಾಮಾನ್ಯ. ಟಿಕೆಟ್ ಹಂಚಿಕೆ ವಿಚಾರವನ್ನು ಹೈಕಮಾಂಡ್'ಗೆ ಬಿಟ್ಟಿದ್ದೇವೆ. ಹೈಕಮಾಂಡ್ ಸೂಚಿಸಿದ ಅಭ್ಯರ್ಥಿಯ ಗೆಲುವಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆಂದು ಜಿಲ್ಲಾ ಕಾಂಗ್ರೆಸ್ ಮುಖ್ಯಸ್ಥ ಕೆಪಿ ಅನ್ಶುಮಂತ್ ಅವರು ಹೇಳಿದ್ದಾರೆ.

ನಾವು ಪ್ರಾಮಾಣಿಕ, ನಿಷ್ಠಾವಂತ ಮತ್ತು ಮೂಲ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿದ್ದೇವೆ ಎಂದು ಪವನ್ ಹೇಳಿದ್ದಾರೆ.

ಬೇರೆ ಪಕ್ಷದಿಂದ ಕಾಂಗ್ರೆಸ್'ಗೆ ಸೇರಿದ ಟಿಕೆಟ್ ಆಕಾಂಕ್ಷಿಯೊಬ್ಬರು ಪಕ್ಷದ ಕಾರ್ಯಕರ್ತರು ಅಥವಾ ಮುಖಂಡರನ್ನು ಸಂಪರ್ಕಿಸದೆ ಒಂದು ವರ್ಗದ ಜನರನ್ನು ಓಲೈಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಬಿಜೆಪಿಯ ಸಿಟಿ ರವಿ ವಿರುದ್ಧ ಅಲೆ ಇದೆ. ಆದ್ದರಿಂದ ನಾವು ನಿಷ್ಠಾವಂತ ಮತ್ತು ಮೂಲ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT