ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ 2023: ಜೆಡಿಎಸ್ ಶಾಸಕ ಸ್ಥಾನಕ್ಕೆ ಶಿವಲಿಂಗೇಗೌಡ ರಾಜಿನಾಮೆ

Srinivasamurthy VN

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023 ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಜಾತ್ಯಾತೀತ ಜನತಾದಳದ ಅರಸೀಕೆರೆ ಶಾಸಕ ಶಿವಲಿಂಗೇಗೌಡ ತನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದ ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಭಾನುವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಸೇರ್ಪಡೆಯ ದಾರಿ ಸುಗಮ ಮಾಡಿಕೊಂಡಿದ್ದಾರೆ. ಇಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಬಂದ ಶಿವರಾಮೇಗೌಡ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ವೇಳೆ ಕಾಗೇರಿ ಹಾಗೂ ಶಿವಲಿಂಗೇಗೌಡ ಅವರು ವಿಧಾನಸಭೆ ಅಧಿವೇಶನದ ವೇಳೆ ಜನಪರವಾಗಿ ಆಡಿದ ಮಾತುಗಳನ್ನು ಪರಸ್ಪರ ಶ್ಲಾಘಿಸಿದರು. 

ಶಿವಲಿಂಗೇಗೌಡರ ಜೊತೆ 300ಕ್ಕೂ ಅಧಿಕ ಬೆಂಬಲಿಗರು ಆಗಮಿಸಿದ್ದರು. 2008ರಲ್ಲಿ ಮೊದಲ ಬಾರಿ  ಶಾಸನಸಭೆಗೆ ಆಯ್ಕೆಯಾಗಿದ್ದ ಅವರು 2018ರ ಚುನಾವಣೆಯಲ್ಲಿ ಅರಸಿಕೆರೆ ವಿಧಾನಸಭೆ ಕ್ಷೇತ್ರದಲ್ಲಿ 93,986 ಮತಗಳನ್ನು ಪಡೆದು ಜಯಗಳಿಸಿದ್ದರು. ಪಕ್ಷದಲ್ಲಿ ನಿರೀಕ್ಷಿತ ಮನ್ನಣೆ, ಸ್ಥಾನಮಾನ ಸಿಗದ ಕಾರಣ ಅವರು ಜೆಡಿಎಸ್ ತೊರೆಯಲು ನಿರ್ಧರಿಸಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಿದ್ಧಪಡಿಸಿಕೊಂಡಿದ್ದಾರೆ.

SCROLL FOR NEXT