ಹಾಲಾಡಿ ಶ್ರೀನಿವಾಸ ಶೆಟ್ಟಿ 
ರಾಜಕೀಯ

ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಕರಾವಳಿಯ ವಾಜಪೇಯಿ ಎಂದೇ ಖ್ಯಾತಿ ಪಡೆದಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಉಡುಪಿ: ಕರಾವಳಿಯ ವಾಜಪೇಯಿ ಎಂದೇ ಖ್ಯಾತಿ ಪಡೆದಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

1999 ರಿಂದ ಇಲ್ಲಿಯವರೆಗೆ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ 72 ವರ್ಷದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು, ತಾವು ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತ 5 ಅವಧಿಗೆ ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿಶ್ಚಯಿಸಿದ್ದೇನೆ ಎಂದು ಹೇಳಿದ್ದಾರೆ.

ವಿಧಾನಸಭಾ ಸದಸ್ಯನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ನಿಷ್ಠೆಯಿಂದ ಜವಾಬ್ದಾರಿ ನಿಭಾಯಿಸಿದ್ದೇನೆ. ಕುಂದಾಪುರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು, ಎಲ್ಲ ವರ್ಗದ ಮತದಾರರಿಗೂ ಬೇಡಿಕೆಗಳನ್ನು ಹೇಳಿಕೊಳ್ಳಲು ಅವಕಾಶ ಮಾಡಿಕೊಟ್ಟ, ನೋವು ಸಂಕಷ್ಟಗಳಿಗೆ ಸ್ಪಂದಿಸಿದ ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ಇದೆ.

ಐದೂ ಚುನಾವಣೆಗಳಲ್ಲಿ ದಾಖಲೆ ಮತಗಳ ಅಂತರದಿಂದ ಚುನಾಯಿಸಿದ ಕ್ಷೇತ್ರದ ಮತದಾರರನ್ನು ವಿಶ್ವಾಸಕ್ಕೆ ಪಡೆದು, ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿ ಪ್ರೀತಿ ವಿಶ್ವಾಸ ಗಳಿಸಿದ ಹೆಮ್ಮೆ ಇದೆ. ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್‌, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿಗೆ ದುಡಿದಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಹಾಗೂ ಅಭಿಮಾನಿಗಳಿಗೆ ಚಿರ ಋಣಿಯಾಗಿರುತ್ತೇನೆ. ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ಮಾರ್ಗದರ್ಶನ ನೀಡಿದ ಹಾಗೂ ಸಹಕಾರ ನೀಡಿದ ಪಕ್ಷದ ಪ್ರಮುಖರಿಗೆ, ಹಿರಿಯ ಕಿರಿಯ ಸ್ನೇಹಿತರಿಗೆ, ಅಧಿಕಾರಿಗಳಿಗೆ, ಮಾಧ್ಯಮದವರಿಗೆ ಹಾಗೂ ಕ್ಷೇತ್ರದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮತದಾರರು ನನ್ನ ಮೇಲಿಟ್ಟ ಪ್ರೀತಿ ಮತ್ತು ನಂಬಿಕೆಯೇ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಗಿದೆ. ಸಮಸ್ತ ಮತ ಬಾಂಧವರಿಗೂ ಕೃತಜ್ಞತೆ ಸಲ್ಲಿಸುತ್ತ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಬಿಜೆಪಿಯಿಂದ ಆಯ್ಕೆಯಾಗಲು ಅವಕಾಶ ಕೊಟ್ಟ ಪಕ್ಷಕ್ಕೂ ಹಾಗೂ ಪಕ್ಷೇತರನಾಗಿ ನಿಂತು ಗೆಲ್ಲಲು ಸಹಕರಿಸಿದವರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ. ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗೆ ಮತದಾರರು ಸಹಕಾರ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT