ಪಶ್ಚಾತಾಪ ಸತ್ಯಾಗ್ರಹದಲ್ಲಿ ಎಚ್.ವಿಶ್ವನಾಥ್ ಮತ್ತಿತರರು 
ರಾಜಕೀಯ

ಮೈಸೂರು: ಬಿಜೆಪಿ ಸರ್ಕಾರ ಬರಲು ಕಾರಣವಾಗಿದ್ದಕ್ಕೆ ಎಚ್.ವಿಶ್ವನಾಥ್ 'ಪಶ್ಚಾತಾಪ ಸತ್ಯಾಗ್ರಹ'

ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಸರಕಾರ ಬರಲು ಕಾರಣವಾದ ಎಚ್.ವಿಶ್ವನಾಥ್‌ ಸೋಮವಾರ ಪಶ್ಚಾತಾಪ ಸತ್ಯಾಗ್ರಹ ‌ನಡೆಸಿದರು.

ಮೈಸೂರು: ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಸರಕಾರ ಬರಲು ಕಾರಣವಾದ ಎಚ್.ವಿಶ್ವನಾಥ್‌ ಸೋಮವಾರ ಪಶ್ಚಾತಾಪ ಸತ್ಯಾಗ್ರಹ ‌ನಡೆಸಿದರು.

ಇಲ್ಲಿನ ನ್ಯಾಯಾಲಯದ ಮಹಾತ್ಮ ಗಾಂಧೀಜಿ ಪುತ್ಥಳಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇರಿಸಿಕೊಂಡು ಕೆಲಕಾಲ ಸಾಂಕೇತಿಕವಾಗಿ ಪಶ್ಚಾತ್ತಾಪ ಸತ್ಯಾಗ್ರಹ  ನಡೆಸಿದ ಎಚ್.ವಿಶ್ವನಾಥ್, ಬಳಿಕ ರಸ್ತೆ ಬದಿಯಲ್ಲಿ ಹಾಕಿದ್ಧ ಪೆಂಡಾಲ್‌ನೊಳಗೆ ಕುಳಿತು ಪಶ್ಚಾತ್ತಾಪ ಸತ್ಯಾಗ್ರಹ ನಡೆಸಿದರು. ಪ್ರಗತಿಪರ ಚಿಂತಕರಾದ ಕೆ.ಎಸ್.ಭಗವಾನ್, ಬಸವಲಿಂಗಯ್ಯ ಸೇರಿದಂತೆ ಹಲವು ಪ್ರಮುಖರು ವಿಶ್ವನಾಥ್ ಅವರಿಗೆ ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಚ್.ವಿಶ್ವನಾಥ್, ಬಿಜೆಪಿಯಂತಹ ಭ್ರಷ್ಟ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹೊಂದಾಣಿಕೆ ಇಲ್ಲದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಅನಿವಾರ್ಯವಾಗಿ  ಬಿಜೆಪಿ ಸೇರಬೇಕಾಯಿತು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ಧುದರಿಂದ, ರಾಜ್ಯದಲ್ಲೂ ಅದೇ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಒಳಿತಾಗಲಿದೆಯೆಂದು ಸಮಾನ ಮನಸ್ಕರೊಡನೆ ಸೇರಿ ಚರ್ಚಸಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು.

ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಅಭಿವೃದ್ಧಿ ಆಗುವ ಕನಸು ಕಂಡಿದ್ದೆ. ಆದರೆ, ಅದೆಲ್ಲವೂ ನುಚ್ಚುನೂರಾದವು' ಎಂದು ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಸದ್ಯದಲ್ಲೇ ಇದೇ ಮಾತು ಬಿಜೆಪಿಗೆ ಹೋಗಿರುವ ಬಹುತೇಕ ವಲಸಿಗರ ಬಾಯಲ್ಲೂ ಬರಲಿದೆ. ಹಕ್ಕಿಗಳು ಮೊಟ್ಟೆ ಇಟ್ಟು ಮರಿ ಮಾಡಲು ಬೇರೆ ಪ್ರದೇಶಕ್ಕೆ ವಲಸೆ ಹೋಗುತ್ತವೆ, ಆದರೆ ಎಂದಿಗೂ ವಲಸೆಯ ಪ್ರದೇಶಕ್ಕೆ ಹೊಂದಿಕೊಂಡು ಅಲ್ಲೇ ಬದುಕಲಾರವು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT