ಶಶಿಭೂಷಣ ಹೆಗಡೆ ಬಿಜೆಪಿ ಸೇರ್ಪಡೆ 
ರಾಜಕೀಯ

ವರ್ಕೌಟ್ ಆಯ್ತು ಬೊಮ್ಮಾಯಿ ಪ್ಲಾನ್: ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ ಹೆಗಡೆ ಬಿಜೆಪಿ ಸೇರ್ಪಡೆ!

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ ಹೆಗಡೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ ಹೆಗಡೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಚುನಾವಣಾ ನಿರ್ವಹಣ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತರಾವ್‌ ಖೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಸಮ್ಮುಖದಲ್ಲಿ ಶಶಿಭೂಷಣ ಸೇರ್ಪಡೆಗೊಂಡರು.

ಶಶಿಭೂಷಣ್ ಹೆಗಡೆ ಹಿಂದೆ ಕುಮಟಾ ಕ್ಷೇತ್ರದಲ್ಲಿ ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು. 2018 ರಲ್ಲಿ ಶಿರಸಿ ಕ್ಷೇತ್ರದಲ್ಲಿ 3ನೇ ಸ್ಥಾನದಲ್ಲಿದ್ದರು. ಮೂರು ಸೋಲಿನ ನಂತರ ಜೆಡಿಎಸ್ ನಲ್ಲೇ ತಮ್ಮ ಅಸ್ತಿತ್ವ ಉಳಿಸಿಕೊಂಡು ಶಿರಸಿ ಕ್ಷೇತ್ರದಲ್ಲಿ ತಮ್ಮ ಹಿಡಿತ ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನದಲ್ಲಿ ಸಾಗಿದ್ದರು.

ಈ ಬಾರಿ ಮತ್ತೆ ಸ್ಪರ್ಧಿಸಲು ಅವಕಾಶ ಒದಗಿ ಬಂದರೂ ಸ್ಫರ್ಧಿಸುವ ಮನಸ್ಸು ಮಾಡಲಿಲ್ಲ. ಈ ನಡುವೆ ಕಾಂಗ್ರೆಸ್‌ ಸಹ ಶಶಿಭೂಷಣ್ ಹೆಗಡೆ ಅವರನ್ನ ಪಕ್ಷಕ್ಕೆ ಸೆಳೆಯಲು ಕಸರತ್ತು ನಡೆಸಿತ್ತು. ಆದರೇ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಯತ್ನದ ಫಲದಿಂದ ಕೊನೆಗೂ ಮತ್ತೆ ಶಶಿಭೂಷಣ್ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಗೇರಿ ಅವರಿಗೆ ಪ್ರಬಲ ಬ್ರಾಹ್ಮಣ ನಾಯಕರ ಪ್ರತಿಸ್ಪರ್ಧಿ ಇಲ್ಲದಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡನೆ; 1 ಲಕ್ಷ ರೂ. ದಂಡ; 10 ವರ್ಷ ಶಿಕ್ಷೆ!

ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನ ದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು!

ಹಲವು ಅಪರಾಧಗಳಲ್ಲಿ ಭಾಗಿಯಾದ ಬಜರಂಗದಳವನ್ನು ನಿಷೇಧಿಸಿ: ಬಿಕೆ ಹರಿಪ್ರಸಾದ್ ಆಗ್ರಹ

ಗೋವಿಂದಾ... ಗೋವಿಂದ..: TTDಗೆ 10 ವರ್ಷ ಕೋಟ್ಯಾಂತರ ರೂ. ಪಂಗನಾಮ; "ರೇಷ್ಮೆ" ಹಗರಣದಿಂದ ಭಾರಿ ನಷ್ಟ, ಅವಮಾನ!

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: 'ನಾನು ಕೇವಲ ಪಾರ್ಟನರ್' ಎಂದ ಬಂಧಿತ ಅಜಯ್ ಗುಪ್ತಾ

SCROLL FOR NEXT