ಸಿಎಂ ಬೊಮ್ಮಾಯಿ 
ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಚ್ಚರಿಯ ಪ್ಯಾಕೇಜ್‌, ಹೊಸ ಮುಖಗಳಿಗೆ ಮಣೆ: ಸಿಎಂ ಬೊಮ್ಮಾಯಿ

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಈ ಬಾರಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ಘೋಷಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಈ ಬಾರಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ಘೋಷಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯ ಚುನಾವಣಾ ಸಮಿತಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಈ ಬಾರಿ ಪಟ್ಟಿಯಲ್ಲಿ ಹಲವು ಅಚ್ಚರಿಯ ಪ್ಯಾಕೇಜ್‌ಗಳು ಇರಲಿವೆ. ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಚ್ಚರಿ ಮೂಡಲಿದೆ. ಹಲವು ಕಡೆ ಹೊಸ ಪ್ರಯೋಗ ಮಾಡಲಾಗುವುದು. ಹಲವು ರಾಜ್ಯಗಳಲ್ಲಿ ಇದು ಯಶಸ್ವಿಯಾಗಿದೆ. ಅಚ್ಚರಿ ಮೂಡಿಸುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳಿದರು. 

ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎರಡು ದಿನಗಳ ಜಿಲ್ಲಾ ಸಮಿತಿಗಳ ಸಭೆ ಮುಗಿದಿದೆ. ಇಂದು ಮತ್ತು ನಾಳೆ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಮಿತಿಗೆ ಕಳುಹಿಸಲಾಗುವುದು, ಏಪ್ರಿಲ್ 8 ರಂದು ಕೇಂದ್ರ ಸಮಿತಿಯಿಂದ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ವಿವರಿಸಿದರು.

"ಪ್ರಜಾಸತ್ತಾತ್ಮಕ ರೀತಿಯಲ್ಲಿ ಟಿಕೆಟ್‌ಗಳನ್ನು ವಿತರಿಸಲಾಗುವುದು, ತಳಮಟ್ಟದಿಂದ ವರದಿಗಳನ್ನು ಪಡೆದ ನಂತರ ಮತ್ತು ವಾಸ್ತವತೆಯ ಆಧಾರದ ಮೇಲೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

ಮೂಲಗಳ ಪ್ರಕಾರ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಏಪ್ರಿಲ್ 7 ರಂದು ದೆಹಲಿಗೆ ಹೋಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT