ರಾಜಕೀಯ

ಸಾರ್ವಜನಿಕರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಅಭ್ಯರ್ಥಿಗಳ ನಕಲಿ ಪಟ್ಟಿ ರಿಲೀಸ್: ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ದಾಖಲು

Shilpa D

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ನಕಲಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಬಿಜೆಪಿ ದೂರು ದಾಖಲಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪಟ್ಟಿಯನ್ನು ರಾಜಕೀಯ ದುರುದ್ದೇಶದಿಂದ ಹಾಗೂ ಬಿಜೆಪಿ ಮಾನಹಾನಿ ಮಾಡಲು ಮತ್ತು  ಸೂಕ್ಷ್ಮ ಸಮಯದಲ್ಲಿ ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಈ ಕೆಲಸ  ಮಾಡಲಾಗಿದೆ ಎಂದು ಬಿಜೆಪಿ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಎಂಎಲ್‌ಸಿ ಅಶ್ವತ್ಥನಾರಾಯಣ್ ಲಿಖಿತ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಕಲಿ ಪಟ್ಟಿಯನ್ನು ಚಲಾವಣೆ ಮಾಡುತ್ತಿರುವವರು ಕಾಂಗ್ರೆಸ್‌ನೊಂದಿಗೆ ನಂಟು ಹೊಂದಿದ್ದಾರೆ ಎಂದು ನಂಬಲು ಬಲವಾದ ಕಾರಣಗಳಿವೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಹೆಸರಿನಲ್ಲಿ ನಕಲಿ ಪಟ್ಟಿಯನ್ನು ನೀಡಲಾಗಿದ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಹಿಯೊಂದಿಗೆ ನಕಲಿ ಮಾಡಲಾಗಿದೆ ಎಂದು ಹೇಳಿದರು.

ಈ ವಂಚಕರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಅಂತಹ ಯಾವುದೇ ಪಟ್ಟಿಯನ್ನು ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಲ್ಲಾ ಪೋಸ್ಟ್‌ಗಳು ನಕಲಿ ಮತ್ತು ಸುಳ್ಳು, ಸಾರ್ವಜನಿಕರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಪೋಸ್ಟ್ ಮಾಡಲಾಗಿದೆ ಎಂದಿದ್ದಾರೆ.

ಇದರ ಹಿಂದೆ ಇರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸುಮಲತಾ ಅಂಬರೀಶ್, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಬಿಜೆಪಿ ಸಂಸದರ ಹೆಸರು ಪಟ್ಟಿಯಲ್ಲಿದೆ.

SCROLL FOR NEXT