ಬೆಂಗಳೂರು: ಮಾಜಿ ಲೋಕಸಭಾ ಸದಸ್ಯ ಹಾಗೂ ಮಂಡ್ಯ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕ ಎಲ್.ಆರ್.ಶಿವರಾಮೇ ಗೌಡ ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್.ಆರ್. ಶಿವರಾಮೇಗೌಡ ಅವರನ್ನು ಪಕ್ಷದ ಪ್ರಮುಖರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡಿದ್ದು, ನಂತರ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.
ಶಿವರಾಮೇಗೌಡರ ಜೊತೆಗೆ ಈ ಸಂದರ್ಭದಲ್ಲಿ ಅವರ ಪುತ್ರ ಮತ್ತು ಬೆಂಬಲಿಗರು ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ನಾಗಮಂಗಲದಲ್ಲಿ ಬಿಜೆಪಿ ಸಂಘಟನೆ ಕೊರತೆ ಎದುರಿಸುತ್ತಿದ್ದು, ಶಿವರಾಮೇಗೌಡ ಅವರಂತಹ ಪ್ರಭಾವಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿರುವುದು ಕಮಲ ನಾಯಕರಿಗೆ ಹೆಚ್ಚಿನ ಶಕ್ತಿ ತುಂಬಿದೆ.
ಇದನ್ನೂ ಓದಿ: ಕುಸಿಯುತ್ತಿದ್ಯಾ ದಳಪತಿಗಳ ಸಾಮ್ರಾಜ್ಯ?: 40 ರಿಂದ 31ಕ್ಕಿಳಿದ ಜೆಡಿಎಸ್ ಶಾಸಕರ ಸಂಖ್ಯೆ; ಎಚ್ ಡಿಕೆ 'ಕಿಂಗ್ ಮೇಕರ್' ಕನಸು ಭಗ್ನ!
ಈ ಹಿಂದೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‍ನಲ್ಲಿದ್ದ ಅವರು ಶಾಸಕರಾಗಿ ಹಾಗೂ ಒಂದು ಬಾರಿ ಮಂಡ್ಯ ಲೋಕಸಭಾ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.