ರಾಜಕೀಯ

ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್ 2ನೇ ಪಟ್ಟಿ ಇಂದು ಬಿಡುಗಡೆ

Manjula VN

ಬೆಂಗಳೂರು: ಬುಧವಾರ ಪ್ರಕಟವಾಗುವ ನಿರೀಕ್ಷೆಯಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಲಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಉಳಿದ ಕೆಲವು ಸ್ಥಾನಗಳ ಕುರಿತು ನಾಳೆ ಮಧ್ಯಾಹ್ನ 2.30ಕ್ಕೆ ಸಿಇಸಿ ಚರ್ಚೆ ನಡೆಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೇಳಿದ್ದಾರೆ.

100 ಸ್ಥಾನಗಳನ್ನು ಒಳಗೊಂಡಿರುವ ಎರಡನೇ ಪಟ್ಟಿಯನ್ನು ಕುರಿತು ಮಂಗಳವಾರ ಮತ್ತು ಬುಧವಾರ ನಡೆದ ಸಭೆಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸದಸ್ಯರು ಕೆಲಕಾಲ ಮಾತಿನ ಚಕಮಕಿಗಳು ನಡೆಯಿದ್ದವು. ನಂತರ ಬಹುಪಾಲು ಸ್ಥಾನಕ್ಕೆ ಒಮ್ಮತ ಮೂಡಿಬಂದಿತ್ತು. ಆದರೆ, ಇನ್ನೂ ಕೆಲ ಸ್ಥಾನಗಳ ಬಗ್ಗೆ ಸ್ಪಷ್ಟ ಮಾಹಿತಿಗಳು ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಪಕ್ಷವು ಹೆಚ್ಚಾಗಿ ಹಾಲಿ ಶಾಸಕರು ಅಥವಾ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರಿಂದ ಮೊದಲ ಪಟ್ಟಿಯನ್ನು ಸುಲಭವಾಗಿ ಸಿದ್ಧಪಡಿಸಲಾಗಿತ್ತು. ಆದರೆ, ಎರಡನೇ ಪಟ್ಟಿಯಲ್ಲಿ ಸಮೀಕ್ಷೆ ವರದಿಗಳು ಹಾಗೂ ಗ್ರೌಂಡ್ ರಿಪೋರ್ಟ್ ಗಳ ಮೇಲೆ ಅವಲಂಬಿತರಾಗಿರುವುದರಿಂದ ಪಟ್ಟಿ ಅಂತಿಮಗೊಳಿಸಲು ಕಾಲಾವಕಾಶ ತೆಗೆದುಕೊಳ್ಳುತ್ತಿದೆ ಎಂದು ವರದಿಗಳು ತಿಳಿಸಿವೆ.

SCROLL FOR NEXT