ರಾಜಕೀಯ

ಯಾದಗಿರಿ: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ, ನಿಷೇಧಾಜ್ಞೆ ಜಾರಿ

Nagaraja AB

ಯಾದಗಿರಿ: ಜಿಲ್ಲೆಯ ಸುರಪುರ ಕ್ಷೇತ್ರದ ಕೊಡೇಕಲ್ ಗ್ರಾಮದಲ್ಲಿ ಗುರುವಾರ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆ ನಡೆದಿದ್ದರಿಂದ  2 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ನೀಡಿದ್ದಾರೆ.

ಸುರಪುರದ ಹಾಲಿ ಶಾಸಕ ರಾಜೂಗೌಡ ಹಾಗೂ ಮಾಜಿ ಶಾಸಕ, ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕರ ನಡುವಿನ ಬಣಗಳ ನಡುವೆ ನಡೆದ ಕಲ್ಲು ತೂರಾಟದಲ್ಲಿ ಹದಿನೈದಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಇಡೀ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಖಾಕಿ ಸರ್ಪಗಾವಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಮೂರು ಕೆಎಸ್‌ಆರ್‌ಪಿ ತುಕಡಿ, 1 ಪ್ಯಾರಾ ಮಿಲಿಟರಿ ಪಡೆ ತುಕಡಿ ಸೇರಿದಂತೆ ಬಿಗಿ ಭದ್ರತೆ ಒದಗಿಸಲಾಗಿದೆ. ಕಲಬುರಗಿ ಈಶಾನ್ಯ ವಲಯ ಐಜಿಪಿ ಅನುಪಮ ಅಗರವಾಲ್ ಹಾಗೂ ಯಾದಗಿರಿ ಎಸ್‌ಪಿ ಡಾ. ಸಿಬಿ ವೇದಮೂರ್ತಿ ಗ್ರಾಮದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. 

SCROLL FOR NEXT