ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆಗೆ ರೌಡಿ ಶೀಟರ್ ಫಯಾಜ್ ಚೌಟಿ ಇರುವ ಚಿತ್ರ 
ರಾಜಕೀಯ

ರೌಡಿ ಶೀಟರ್ ಫಯಾಜ್ ಚೌಟಿ ಜೊತೆ ಸ್ಪೀಕರ್ ಕಾಗೇರಿ ಸಭೆ: ಫೋಟೋ ವೈರಲ್

ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ.

ಶಿರಸಿ: ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ.

ಫಯಾಜ್ ಚೌಟಿ  ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ. ಆದರೆ, ಐದು ದಿನಗಳ ಹಿಂದೆ ಚೌಟಿ ಸ್ಪೀಕರ್ ಕಾಗೇರಿ ಪಕ್ಕದಲ್ಲೇ ಕುಳಿತು ಸಭೆ ನಡೆಸಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಕ್ಷೇತ್ರದ ಯಾವುದೋ ಸಮಸ್ಯೆ ಇಟ್ಟುಕೊಂಡು ರೌಡಿ ಶೀಟರ್ ಚೌಟಿ ಬಳಿ ಚರ್ಚೆಗೆ ಬಂದಿದ್ದರು ಎಂದು ಕಾಗೇರಿ ಕಚೇರಿ ಮೂಲಗಳು ತಿಳಿಸಿವೆ. ಆದರೆ, ಚುನಾವಣೆ ಸಂದರ್ಭದಲ್ಲಿ ಆಪ್ತನಂತೆ ಕಾಗೇರಿ ಅಕ್ಕಪಕ್ಕದಲ್ಲಿಯೇ ಕುಳಿತು ಚೌಟಿ ಸಭೆ ನಡೆಸಿರುವುದು ಕ್ಷೇತ್ರದ ಜನರಲ್ಲಿ ತೀವ್ರ ಅಚ್ಚರಿ ಮೂಡಿಸಿದೆ.

ಇನ್ನೂ ಸಭೆಯ ಎರಡು ದಿನದ ನಂತರ ಹಂದಿ ಅಣ್ಣಿ ಕೊಲೆ ಆರೋಪಿಗಳನ್ನು ತನ್ನ ಆಂಬ್ಯುಲೆನ್ಸ್ ನಲ್ಲಿ ಎಸ್ಕೆಪ್ ಮಾಡಿಸಿದ ಆರೋಪದಡಿ 2 ದಿನಗಳ ಹಿಂದೆಯಷ್ಟೇ ದಾವಣಗೆರೆ ಪೊಲೀಸರಿಂದ ಬಂಧನವಾಗಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ಬೆಂಗಳೂರು: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ; Oyo ರೂಂನಲ್ಲಿ ಮಹಿಳೆ ಆತ್ಮಹತ್ಯೆ!

ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆಯಲ್ಲಿ, ಕೈ ಮುಗಿದು ಕುಳಿತ ನಿತೀಶ್ ಕುಮಾರ್; ವ್ಯಾಪಕ ಟೀಕೆ!: Video

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

SCROLL FOR NEXT