ಕಿಚ್ಚ ಸುದೀಪ್ 
ರಾಜಕೀಯ

ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ: ನಟನ ಸಿನಿಮಾಗಳ ಪ್ರಸಾರ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿ

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ.

ಬೆಂಗಳೂರು: ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ.

ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸುದೀಪ್ ಅವರ ಸಿನಿಮಾ, ಜಾಹೀರಾತು, ಟಿವಿ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸಬೇಕು ಎಂದು ಜೆಡಿಎಸ್ ರಾಜ್ಯ ಕಾನೂನು ಘಟಕದ ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಗುರುವಾರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

ನಟನ ಚಲನಚಿತ್ರಗಳು ಅಥವಾ ಕಾರ್ಯಕ್ರಮಗಳ ಪ್ರಸಾರವು ಮತದಾರರ ಮೇಲೆ ಪ್ರಭಾವ ಬೀರಬಹುದು. ಆದ್ದರಿಂದ ಅವುಗಳನ್ನು ನಿಷೇಧಿಸಲು ಆದೇಶವನ್ನು ಹೊರಡಿಸಬೇಕು. ಸಾರ್ವಜನಿಕ ಸ್ಥಳಗಳಿಂದ ನಟನ ಫೋಟೊ ಇರುವ ಪೋಸ್ಟರ್‌ಗಳನ್ನು ತೆಗೆಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಿಇಸಿಗೆ ಮನವಿ ಮಾಡಿದರು.

ಬೊಮ್ಮಾಯಿ ಅವರೊಂದಿಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT