ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಿನ್ನೆ ದೆಹಲಿಯಲ್ಲಿ ನಡೆಯಿತು 
ರಾಜಕೀಯ

ಇಂದು ಮತ್ತೊಂದು ಸುತ್ತಿನ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ: ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮುಂಬರುವ ಕರ್ನಾಟಕ ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಬಿಜೆಪಿ ಯಾವ ರೀತಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ ಎಂಬ ಕುತೂಹಲ ಬಹಳ ಮಂದಿಗೆ.

ನವದೆಹಲಿ/ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಬಿಜೆಪಿ ಯಾವ ರೀತಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ ಎಂಬ ಕುತೂಹಲ ಬಹಳ ಮಂದಿಗೆ.

ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನಿನ್ನೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದರು. ನಿನ್ನೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸುಮಾರು 2 ಗಂಟೆ ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಕೆಲ ಕ್ಷೇತ್ರಗಳ ಬಗ್ಗೆ ಇನ್ನೂ ಚರ್ಚೆ ಅಗತ್ಯವಿದೆ. ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಬಿಜೆಪಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. 

ಎರಡು ಭಾಗಗಳಾಗಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಸಭೆಯಲ್ಲಿ ಅಭ್ಯರ್ಥಿಗಳ ಕುರಿತು ವಿವರವಾದ ಚರ್ಚೆ ನಡೆಸಿದ್ದೇವೆ. ರಾಷ್ಡ್ರೀಯ ಅಧ್ಯಕ್ಷರ ಒಪ್ಪಿಗೆ ಪಡೆದು ನಾಳೆ ಮೊದಲ ಪಟ್ಟಿ ಪ್ರಕಟಿಸುತ್ತೇವೆ. ದೊಡ್ಡ ಸಂಖ್ಯೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಸುಮಾರು 170ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ ಎಂದು ತಿಳಿಸಿದರು.

ಸುಮಾರು 2 ಗಂಟೆ ಕಾಲ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ್ ಜೋಶಿ, ಸಿಎಂ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು, ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಧಾನ್​ ಭಾಗಿಯಾಗಿದ್ದರು.

ಇಂದು ಮತ್ತೊಂದು ಸುತ್ತಿನ ಸಭೆ: ನಿನ್ನೆ ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಅಂತಿಮವಾಗಿಲ್ಲ. ಇಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಬಳಿಕ ಪಟ್ಟಿ ಇಂದು ಅಪರಾಹ್ನ ಅಥವಾ ನಾಳೆ ಬೆಳಗ್ಗೆ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್