ಜಗದೀಶ್ ಶೆಟ್ಟರ್ 
ರಾಜಕೀಯ

ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ನಾನು ಸ್ಪರ್ಧಿಸಿಯೇ ತೀರುತ್ತೇನೆ ಎಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ನೀಡಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್ ಅವರು ನಾನು ಚುನಾವಣೆಯಲ್ಲಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ನೀಡಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್ ಅವರು ನಾನು ಚುನಾವಣೆಯಲ್ಲಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಹೇಳಿದ್ದಾರೆ.

ಚುನಾವಣ ಕಣದಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂಬುದನ್ನು ಒಪ್ಪಿಕೊಂಡ ಶೆಟ್ಟರ್, ಹೊಸ ಮುಖಗಳಿಗೆ ಅವಕಾಶ ನೀಡಿಬೇಕು. ಈ ಹಿನ್ನೆಲೆಯಲ್ಲಿ ಸರಿಯುವಂತೆ ಸೂಚಿಸಿದ್ದಾರೆ ಎಂದರು. 

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಷ್ಟು ದಿನದಿಂದ ಟಿಕೆಟ್ ನೀಡುವ ಭರವಸೆ ನೀಡಿದ್ದ ಪಕ್ಷ ಇದೀಗ ದಿಢೀರ್ ಅಂತ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಸೂಚಿಸಿದೆ. ಇದನ್ನು ಎರಡು-ಮೂರು ತಿಂಗಳ ಹಿಂದೆ ನನಗೆ ಹೇಳಬೇಕಿತ್ತು. ಆದರೆ, ಇವತ್ತು ಹೇಳಿದ್ದಾರೆ. ಇದು ನನಗೆ ಬಹಳ ಬೇಸರ ತರಿಸಿದೆ ಎಂದರು. 30 ವರ್ಷ ಪಕ್ಷ ಕಟ್ಟಿದವರಿಗೆ ಹೀಗೆ ಮಾಡಿದ್ದು ಸರಿಯಲ್ಲ. ಹಿರಿಯ ನಾಯಕರಿಗೆ ಗೌರವ ಕೊಡುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ರಾಜಕೀಯ ಜೀವನದಲ್ಲಿ ನನ್ನ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ. ಪಕ್ಷ ನಿಷ್ಠನಾಗಿ ಕೆಲಸ ಮಾಡಿದ್ದೇನೆ. ನನ್ನ ಕ್ಷೇತ್ರದ ಜನ ನನ್ನನ್ನು ಅಶೀರ್ವಾದಿಸುತ್ತಾರೆ. ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT