ಲಕ್ಷ್ಮಣ ಸವದಿ 
ರಾಜಕೀಯ

ಅಥಣಿ ಟಿಕೆಟ್ ಕುಮಟಳ್ಳಿ ತೆಕ್ಕೆಗೆ: ಬಿಜೆಪಿಯ 'ನೀಲಿ'ಗಣ್ಣಿನ 'ನಿಷ್ಠಾವಂತ' ಪುತ್ರನಿಗೆ ನಿರಾಸೆ; ಧರ್ಮಸ್ಥಳದ ಮಂಜುನಾಥನ ಸಾಕ್ಷಿಯಾಗಿ ಮಾತುಕೊಟ್ಟಿದ್ದ ನಾಯಕರು!

ಏಪ್ರಿಲ್ 13 ರಂದು ನನ್ನ ಬೆಂಬಲಿಗರು ಮತ್ತು ಅಥಣಿ ಜನತೆಯನ್ನು ಭೇಟಿ ಮಾಡಿ ಮುಂದಿನ ನಡೆ ಬಗ್ಗೆ ನಿರ್ಧರಿಸುತ್ತೇನೆ, ಜನರು ಬಯಸಿದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತೇನೆ,'' ಎಂದರು. ತಮ್ಮ ಬೆಂಬಲಿಗರ ಇಚ್ಛೆಯಿದ್ದಲ್ಲಿ ಅಥಣಿಯಿಂದ ಪಕ್ಷೇತರರಾಗಿ ಸ್ಪರ್ಧಿಸಲು ಸಿದ್ಧ  ಎಂದು ಸವದಿ ಬಾಂಬ್ ಹಾಕಿದ್ದಾರೆ.

ಬೆಳಗಾವಿ: ಬಿಜೆಪಿಯಿಂದ ಅಥಣಿ ವಿಧಾನಸಭಾ ಕ್ಷೇತ್ರದಿಂದ ಮಹೇಶ ಕುಮಠಳ್ಳಿ ಅವರನ್ನು ಕಣಕ್ಕಿಳಿಸುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅಥಣಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಮುಂದಿನ ನಡೆ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ರಾತ್ರಿ 9 ಗಂಟೆಗೆ ರಿಲೀಸ್ ಮಾಡಿದೆ. ಅಥಣಿ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ಸವದಿ, ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಏಪ್ರಿಲ್ 13 ರಂದು ನನ್ನ ಬೆಂಬಲಿಗರು ಮತ್ತು ಅಥಣಿ ಜನತೆಯನ್ನು ಭೇಟಿ ಮಾಡಿ ಮುಂದಿನ ನಡೆ ಬಗ್ಗೆ ನಿರ್ಧರಿಸುತ್ತೇನೆ, ಜನರು ಬಯಸಿದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತೇನೆ,'' ಎಂದರು. ತಮ್ಮ ಬೆಂಬಲಿಗರ ಇಚ್ಛೆಯಿದ್ದಲ್ಲಿ ಅಥಣಿಯಿಂದ ಪಕ್ಷೇತರರಾಗಿ ಸ್ಪರ್ಧಿಸಲು ಸಿದ್ಧ  ಎಂದು ಸವದಿ ಬಾಂಬ್ ಹಾಕಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಅಥಣಿ ಉಪಚುನಾವಣೆ ವೇಳೆ ಬಿಎಸ್ ಯಡಿಯೂರಪ್ಪ, ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ ಅವರಿಗೆ 2023 ರ ಚುನಾವಣೆಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು. ಅವರು ನನಗೆ ಟಿಕೆಟ್ ಭರವಸೆ ನೀಡಿದ್ದಾರೋ ಇಲ್ಲವೋ ಎಂದು ಧರ್ಮಸ್ಥಳ ಮಂಜುನಾಥನ ಮುಂದೆ ಪ್ರಮಾಣ ಮಾಡಬೇಕು, ಒಂದು ವೇಳೆ ಅವರು  ನಿರಾಕರಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಎಂಎಲ್‌ಸಿ ಚುನಾವಣೆಯಿಂದ ಹೊರಗುಳಿಯುವಾಗ ಬೊಮ್ಮಾಯಿ ಅವರಿಗೆ 2023ರ ಚುನಾವಣೆಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಅವರು ಹೇಳಿದರು. "ನಾನು ಕಳೆದ ಎರಡು ದಶಕಗಳಿಂದ ಪಕ್ಷದ ನಿಷ್ಠಾವಂತ ಸಿಪಾಯಿಯಾಗಿದ್ದು,  ಪಕ್ಷದ ಬೆಳವಣಿಗೆಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಪಕ್ಷವು ಪಕ್ಷದ ನಿಷ್ಠಾವಂತ ಮಗನನ್ನು ಕಳೆದುಕೊಳ್ಳದಂತೆ ನಾನು ವಿನಂತಿಸುತ್ತೇನೆ. ಪಕ್ಷವು ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ನನ್ನನ್ನು ಅಥಣಿಯಿಂದ ಕಣಕ್ಕಿಳಿಸಲು ನಾನು ಮನವಿ ಮಾಡುತ್ತೇನೆ ಎಂದು ಸವದಿ ತಿಳಿಸಿದ್ದಾರೆ.

ಲಕ್ಷ್ಮಣ ಸವದಿ ಈಗಾಗಲೇ ಕಾಂಗ್ರೆಸ್ ಸಂಪರ್ಕದಲ್ಲಿದ್ದು,  ಅಥಣಿಯಿಂದ ಬಿಜೆಪಿ ಟಿಕೆಟ್ ನಿರಾಕರಿಸಿದರೆ ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು  ತಿಳಿಸಿವೆ. ಸವದಿ ಕಾಂಗ್ರೆಸ್ ಸೇರಲು ಬಯಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡ ಅಥಣಿ ಕ್ಷೇತ್ರದ ಅಭ್ಯರ್ಥಿ ಘೋಷಿಸಲು ವಿಳಂಬ ಮಾಡುತ್ತಿದೆ ಎಂದು ತಿಳಿದು ಬಂದಿದೆ.

ಸವದಿ ಅವರು ತಮ್ಮ ರಾಜಕೀಯ ಗುರು ದಿವಂಗತ ಅನಂತ್ ಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯದಲ್ಲಿ ಬೆಳೆಯಲು ಸಹಾಯ ಮಾಡಿದ ಹಲವಾರು ನಾಯಕರಿಗೆ ಧನ್ಯವಾದ ಅರ್ಪಿಸಿದರು.

ಕಳೆದ 30 ವರ್ಷಗಳಿಂದ ನನಗೆ ಆಶೀರ್ವಾದ ಮಾಡಿದ ಅಥಣಿ ಮತಕ್ಷೇತ್ರದ ಜನತೆಗೆ ಯಾವತ್ತೂ ನಾನು ಚಿರಋುಣಿಯಾಗಿದ್ದೇನೆ. ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ನಿಮ್ಮೆಲ್ಲರ ಆಶೀರ್ವಾದದಿಂದ ಶಾಸಕರಾಗಿ, ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ಇಂದು ನನ್ನ ರಾಜಕೀಯ ಜೀವನಕ್ಕೆ ಸಂಕಷ್ಟಎದುರಾಗಿದೆ.

ನಿಮ್ಮೆಲ್ಲರ ಅಭಿಪ್ರಾಯ ನನಗೆ ಅವಶ್ಯಕತೆ ಇದೆ. ವಿವಿಧ ಸಮುದಾಯಗಳ ಅಭಿಪ್ರಾಯವನ್ನು ಈಗಾಗಲೇ ನಾನು ಸಂಗ್ರಹಿಸಿದ್ದೇನೆ. ಎಲ್ಲ ಸಮುದಾಯಗಳು ಬೆಂಬಲವನ್ನು ಸೂಚಿಸಿದ್ದೀರಿ. ನಿಮ್ಮೆಲ್ಲರ ಬೆಂಬಲಕ್ಕೆ ನಾನು ಚಿರಋುಣಿಯಾಗಿದ್ದೇನೆ ಎಂದ ಸವದಿ, ತಮ್ಮ ರಾಜಕೀಯ ಗುರು ದಿವಂಗತ ಅನಂತ್ ಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯದಲ್ಲಿ ಬೆಳೆಯಲು ಸಹಾಯ ಮಾಡಿದ ಹಲವಾರು ನಾಯಕರಿಗೆ ಧನ್ಯವಾದ ಅರ್ಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT