ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ವರಿಷ್ಠರು ಎರಡು ಕಡೆಗೆ ಟಿಕೆಟ್ ಕೊಡುತ್ತಾರೆ ಎಂದುಕೊಂಡಿರಲಿಲ್ಲ; ಮಗನಿಗೆ ಗುಬ್ಬಿ ಅಥವಾ ಗೋವಿಂದರಾಜನಗರ ಕ್ಷೇತ್ರ ಕೇಳಿದ್ದೇನೆ: ವಿ ಸೋಮಣ್ಣ

ಎರಡು ಕಡೆ ವರಿಷ್ಠರು ಟಿಕೆಟ್ ಕೊಡುತ್ತಾರೆ ಎಂದು ಕನಸು ಮನಸಲ್ಲೂ ಅಂದುಕೊಂಡಿರಲಿಲ್ಲ. ವಿಧಿ ನಿಯಮ, ವರಿಷ್ಠರ ತೀರ್ಮಾನ ಎಂದು ಸಚಿವ ವಿ. ಸೋಮಣ್ಣ ಇಂದು ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.

ವಿ ಸೋಮಣ್ಣ
Sumana Upadhyaya
Updated On : 12 Apr 2023, 6:17 pm

ಬೆಂಗಳೂರು: ಎರಡು ಕಡೆ ವರಿಷ್ಠರು ಟಿಕೆಟ್ ಕೊಡುತ್ತಾರೆ ಎಂದು ಕನಸು ಮನಸಲ್ಲೂ ಅಂದುಕೊಂಡಿರಲಿಲ್ಲ. ವಿಧಿ ನಿಯಮ, ವರಿಷ್ಠರ ತೀರ್ಮಾನ ಎಂದು ಸಚಿವ ವಿ. ಸೋಮಣ್ಣ  ಇಂದು ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಿಂದರಾಜನಗರ ನನ್ನ ಜನ್ಮ ಭೂಮಿ. ವರುಣಾ, ಚಾಮರಾಜನಗರ ನನ್ನ ಕರ್ಮ ಭೂಮಿಯಾಗಿದೆ. ಭಗವಂತನ ಇಚ್ಛೆ ಹೇಗಿದಿಯೊ ನೋಡೋಣ. ನಾಳೆಯಿಂದ ವರುಣಾ, ಚಾಮರಾಜನಗರದಲ್ಲಿ ಪ್ರಚಾರ ಆರಂಭಿಸುತ್ತೇನೆ ಎಂದು ಹೇಳಿದರು.

ಗುಬ್ಬಿ, ಗೋವಿಂದರಾಜನಗರ ಟಿಕೆಟ್ ಮಗನಿಗೆ ಕೇಳಿದ್ದೇನೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆಗೂ ಮಾತನಾಡಿದ್ದೇನೆ. ಮಗನಿಗೆ ಟಿಕೆಟ್ ಕೊಡೋದು ಬಿಡೋದು ಹೈಕಮಾಂಡ್‍ಗೆ ಬಿಟ್ಟದ್ದು, ಬೆಂಬಲಿಗರು ಸಂಯಮದಿಂದ ಇರಬೇಕು ಎಂದರು.

Advertisement

Advertisement

ಗೋವಿಂದರಾಜನಗರ ಕ್ಷೇತ್ರ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಸೋಮಣ್ಣನ ಮನೆ ಮುಂದೆ ನೂರಾರು ಕಾರ್ಯಕರ್ತರು ಜಮಾಯಿಸಿದರು. ಸೋಮಣ್ಣ ಮಗ ಡಾ. ಅರುಣ್ ಸೋಮಣ್ಣರಿಗೆ ಗೋವಿಂದರಾಜನಗರದಿಂದಲೇ ಟಿಕೆಟ್ ನೀಡುವಂತೆ ಒತ್ತಾಯ ಮಾಡಿದರು. ಬೇರೆವರಿಗೆ ಟಿಕೆಟ್ ನೀಡಿದ್ರೆ ನಮ್ಮ ಬೆಂಬಲಿಗರಿಗೆ ಕೆಲಸ ಮಾಡಲ್ಲ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಭಗವಂತನ ಸಂದೇಶ ಎಂದು ಕಾಣುತ್ತದೆ, ನಿರೀಕ್ಷೆ ಮಾಡಿರಲಿಲ್ಲ: ವರುಣಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾದ ವಿ ಸೋಮಣ್ಣ

ಕಳೆದ 40 ವರ್ಷಗಳಿಂದ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಗರಪಾಲಿಕೆ ಸದಸ್ಯ, ಶಾಸಕ ಮತ್ತು ಸಚಿವನಾಗಿ ಕೆಲಸ ಮಾಡಿದ್ದೇನೆ. ಇಂತಹ ಸಂದರ್ಭ ಬರುತ್ತದೆ ಎಂದು ಕನಸಿನಲ್ಲೂ ನಿರೀಕ್ಷೆ ಮಾಡಿರಲಿಲ್ಲ. ಯಾರೂ ಕೂಡ ಧೃತಿಗೆಡಬೇಕಿಲ್ಲ. ನಿರೀಕ್ಷೆ ಮಾಡಿರಲಿಲ್ಲ, ಎಲ್ಲವೂ ವಿಧಿ ನಿಯಮ. ಭಗವಂತ ಯಾರಿಗೆ ಏನು ಕೊಡಬೇಕು ಅದನ್ನು ಕೊಡುತ್ತಿದ್ದಾನೆ ಎಂದು ಹೇಳಿದರು.

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧವೇ ಸೋಮಣ್ಣ ಕಣಕ್ಕೆ ಇಳಿಯುತ್ತಿರುವ ಕಾರಣ ಚಾಮರಾಜನಗರದಲ್ಲಿ ಸೋಮಣ್ಣ ಅವರನ್ನು ಕಟ್ಟಿ ಹಾಕಲು ಬಂಡಾಯ ಬಿಜೆಪಿ ನಾಯಕರನ್ನು ನಿಲ್ಲಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments