ನವದೆಹಲಿ: ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ 24 ಗಂಟೆಗಳಲ್ಲೇ 2 ನೇ ಪಟ್ಟಿ ದಿಢೀರ್ ಬಿಡುಗಡೆಯಾಗಿದೆ.
ಬಿಜೆಪಿಯ 2 ನೇ ಪಟ್ಟಿ ಏ.13 ರಂದು ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಇಂದು ರಾತ್ರಿ 11:00 ಗಂಟೆಗೆ 2 ನೇ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದರೆ, 2 ನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ.
ಇತ್ತೀಚೆಗೆ ಹಗರಣವೊಂದರಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ತಪ್ಪಿದ್ದು, ಆ ಕ್ಷೇತ್ರದಿಂದ ಶಿವಕುಮಾರ್ ಎಂಬುವವರಿಗೆ ಟಿಕೆಟ್ ನೀಡಲಾಗಿದೆ.
ಇದನ್ನೂ ಓದಿ: 189 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಟಿಕೆಟ್ ವಂಚಿತರು & ಸ್ಪರ್ಧಿಸಲು ಅವಕಾಶ ಪಡೆದ ಅಭ್ಯರ್ಥಿಗಳು ಇವರು
ಇನ್ನು ಮೂಡಿಗೆರೆ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿಗೂ ಟಿಕೆಟ್ ಕೈತಪ್ಪಿದ್ದು, ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.
2 ನೇ ಪಟ್ಟಿಯಲ್ಲಿ ಟಿಕೆಟ್ ಕಳೆದುಕೊಂಡ 5 ಹಾಲಿ ಶಾಸಕರು!
2 ನೇ ಪಟ್ಟಿಯಲ್ಲಿ ಟಿಕೆಟ್ ಪಡೆದ ಅಭ್ಯರ್ಥಿಗಳ ವಿವರ