ಸಾಂದರ್ಭಿಕ ಚಿತ್ರ 
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಸಭೆ, ನಾಳೆ ಪಟ್ಟಿ ಸಾಧ್ಯತೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಉಳಿದ 35 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕೇಂದ್ರ ಸಚಿವ ಅಮಿತ್ ಶಾ ಬುಧವಾರ ಸಭೆ ನಡೆಸಿದರು. ಮೂಲಗಳ ಪ್ರಕಾರ, ಉಳಿದ ಸೀಟುಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಉಳಿದ 35 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕೇಂದ್ರ ಸಚಿವ ಅಮಿತ್ ಶಾ ಬುಧವಾರ ಸಭೆ ನಡೆಸಿದರು.

ಮೂಲಗಳ ಪ್ರಕಾರ, ಉಳಿದ ಸೀಟುಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.
ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಜೆಪಿಯ ಉನ್ನತ ಮೂಲಗಳ ಪ್ರಕಾರ, ಗೃಹ ಸಚಿವ ಅಮಿತ್ ಶಾ ಸಭೆಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಪಕ್ಷದ ಕರ್ನಾಟಕ ಕೋರ್ ಗ್ರೂಪ್ ಸೂಚಿಸಿದ ಪ್ರತಿಯೊಂದು ಹೆಸರಿನ ಬಗ್ಗೆ ಚರ್ಚೆ ನಡೆಸಲಾಯಿತು.

ಉಳಿದ ಪಟ್ಟಿಯಲ್ಲಿ ಇನ್ನಷ್ಟು ಹೊಸ ಹೆಸರುಗಳಿರಬಹುದು ಎಂದು ಮೂಲಗಳು ತಿಳಿಸಿವೆ. ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿದ್ದವು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಸಭೆಯಲ್ಲಿ ಉಪಸ್ಥಿತರಿದ್ದರು.

ಮೊದಲ ಪಟ್ಟಿ ಹೊರಬಿದ್ದ ಬಳಿಕ ರಾಜ್ಯದ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಮೊದಲ ಪಟ್ಟಿಯಲ್ಲಿ ಬಿಜೆಪಿಯು ಕಾಂಗ್ರೆಸ್‌ನಿಂದ ಬಂದಿದ್ದವರಿಗೆ ಸ್ಥಾನ ನೀಡಿದೆ. ಕರ್ನಾಟಕವು ಒಟ್ಟು 224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ ಮತ್ತು ಸರ್ಕಾರ ರಚಿಸಲು ಪಕ್ಷವೊಂದು 113 ಸ್ಥಾನಗಳಲ್ಲಿ ಗೆಲ್ಲುವ ಅಗತ್ಯವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!