ಎನ್ ಆರ್ ಸಂತೋಷ್- ಯಡಿಯೂರಪ್ಪ 
ರಾಜಕೀಯ

ಬಿಎಸ್ ವೈ ಆಪ್ತ, ಸಂಬಂಧಿ ಎನ್ ಆರ್ ಸಂತೋಷ್ ಗೆ ಜೆಡಿಎಸ್ ಟಿಕೆಟ್

ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ.

ಬೆಂಗಳೂರು: ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ.
 
ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಒಂದು ಕಾಲದಲ್ಲಿ ಆಪ್ತರಾಗಿದ್ದ ಎನ್ ಆರ್ ಸಂತೋಷ್ ಅರಸಿಕೆರೆಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಕಾರಣ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿಯಿಂದ ಜಿವಿಟಿ ಬಸವರಾಜ್ ಗೆ ಟಿಕೆಟ್ ನೀಡಲಾಗಿದ್ದರೆ, ಜೆಡಿಎ ನಾಯಕ ಹೆಚ್ ಡಿ ರೇವಣ್ಣ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎನ್ ಆರ್ ಸಂತೋಷ್ ಅವರೊಂದಿಗೆ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೆಡಿಎಸ್ ನಲ್ಲಿನ ಮೂಲಗಳ ಪ್ರಕಾರ, ಎನ್  ಆರ್ ಸಂತೋಷ್ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಅರಸಿಕೆರೆ ಟಿಕೆಟ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಎನ್ ಆರ್ ಸಂತೋಷ್ ಬೆಂಬಲಿಗರು ಬೆಂಗಳೂರಿನಲ್ಲಿರುವ ದೇವೇಗೌಡ ನಿವಾಸಕ್ಕೆ ತೆರಳಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜೆಡಿಎಸ್ ಅರಸಿಕೆರೆ ವಿಧಾನಸಭಾ ಕ್ಷೇತ್ರದಿಂದ ಕುರುಬ ಸಮುದಾಯದ ಬಾಣಾವರ ಅಶೋಕ್ ಗೆ ಟಿಕೆಟ್ ಘೋಷಿಸಿತ್ತು. ಜೆಡಿಎಸ್ ನ ಹಾಲಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರಿದ್ದರು. ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಎನ್ ಆರ್ ಸಂತೋಷ್ ಲಭ್ಯವಿರಲಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್