ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಬಿಜೆಪಿಯಲ್ಲಿ ಬಂಡಾಯದ ನಿಗಿನಿಗಿ ಕೆಂಡ: ಎಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿದ 'ಕೈ- ಕಮಲ' ಕಲಿಗಳು!

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಟಿಕೆಟ್ ಮಿಸ್ ಆದ ಮುಖಂಡರು ಬುಧವಾರ ಸಂಜೆ ಬೆಂಗಳೂರಿಗೆ ಆಗಮಿಸಿ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರು: ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಟಿಕೆಟ್ ಮಿಸ್ ಆದ ಮುಖಂಡರು ಬುಧವಾರ ಸಂಜೆ ಬೆಂಗಳೂರಿಗೆ ಆಗಮಿಸಿ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.

2008 ರ ಚುನಾವಣೆಯಲ್ಲಿ ಮಾಜಿ ಸಿಎಂ ದಿವಂಗತ ಧರಂ ಸಿಂಗ್ ಅವರನ್ನು ಸೋಲಿಸಿದ ಮತ್ತು 2013 ಮತ್ತು 2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಜಯ್ ಸಿಂಗ್ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಸೇರಿದಂತೆ ಅನೇಕ ಮುಖಂಡರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಕಲಬುರಗಿಯ ಕಾಂಗ್ರೆಸ್ ಮುಖಂಡ ಕೃಷ್ಣಾಜಿ ಕುಲಕರ್ಣಿ, ಯಾದಗಿರಿಯ ಡಾ.ಎ.ಬಿ.ಮಾಲಕರೆಡ್ಡಿ, ಶಹಾಪುರದ ಗುರು ಪಾಟೀಲ ಶಿರವಾಳ ಅವರ ಬೆಂಬಲಿಗರು ಜೆಡಿಎಸ್ ಮುಖಂಡರನ್ನು ಭೇಟಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಒಂದು ಕಾಲದಲ್ಲಿ ಉತ್ತರ ಕರ್ನಾಟಕ ಜನತಾ ಪರಿವಾರ ಅದರಲ್ಲೂ ಜೆಡಿಎಸ್‌ನ ಭದ್ರಕೋಟೆಯಾಗಿತ್ತು ಎಂದು ಹೇಳಿದರು.

ಆದರೆ, ಈ ಭಾಗದ ಹಲವು ಮುಖಂಡರು ಹಲವು ಕಾರಣಕ್ಕೆ ಜೆಡಿಎಸ್ ತೊರೆದಿದ್ದಾರೆ. ಈಗ ಮತ್ತೆ ಜೆಡಿಎಸ್ ಸೇರುತ್ತಿದ್ದಾರೆ. ತಮ್ಮನ್ನು ಭೇಟಿಯಾದ ನಾಯಕರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತೊರೆದವರಿಗೆ ಜೆಡಿಎಸ್ ಸ್ವಾಗತ ಸಮಾರಂಭವನ್ನು ಆಯೋಜಿಸಲಿದೆ. ಶುಕ್ರವಾರ ಸಂಜೆ ಅಥವಾ ಶನಿವಾರ ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT