ಬೆಂಗಳೂರು: ಬಿಜೆಪಿ ಟಿಕೆಟ್ ವಂಚಿತ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಶುಕ್ರವಾರ ಕಾಂಗ್ರೆಸ್ ಸ್ವಾಗತಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಮುಂದಿನ ದಿನಗಳಲ್ಲಿ ಆಡಳಿತ ಪಕ್ಷದ ಹಲವಾರು ನಾಯಕರು ವಿರೋಧ ಪಕ್ಷ ಸೇರಲಿದ್ದಾರೆ ಎಂದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ''ಲಕ್ಷ್ಮಣ ಸವದಿ ಅವರು ಹಿರಿಯ ನಾಯಕರು, ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ ಮತ್ತು ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ನಮ್ಮ ನಾಯಕತ್ವ ಮತ್ತು ಸಿದ್ಧಾಂತದೊಂದಿಗೆ ಹೊಂದಿಕೊಳ್ಳುತ್ತಾರೆ" ಎಂದರು.
"ಇಂದು ಪಕ್ಷದ ಎಲ್ಲಾ ಮುಖಂಡರು ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚೆ ನಡೆಸಿದರು. ಪಕ್ಷದ ಎಲ್ಲಾ ಸದಸ್ಯರು ಅವರಿಗೆ ಹೃತ್ಪೂರ್ವಕ ಸ್ವಾಗತವನ್ನು ನೀಡಿದರು" ಎಂದು ಡಿಕೆಶಿ ಹೇಳಿದರು.
ಲಕ್ಷ್ಮಣ ಸವದಿ ಅವರ ಜೊತೆಗೆ ಇನ್ನೂ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಎಲ್ಲರನ್ನು ಪಕ್ಷಕ್ಕೆ ಒಮ್ಮತದಿಂದ ಸ್ವಾಗತಿಸುತ್ತೇವೆ. ಸವದಿ ಅವರು ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಯನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲಿದ್ದಾರೆ. ನಂತರ ಕಾಂಗ್ರೆಸ್ ಸಂಜೆ 4.30ಕ್ಕೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದರು.