ಸಿದ್ದರಾಮಯ್ಯ ಮತ್ತು ಸೋಮಣ್ಣ 
ರಾಜಕೀಯ

ಹೈವೋಲ್ಟೇಜ್ ಕಣವಾದ ವರುಣಾ: ಯಾರೇ ಬಂದ್ರೂ ಇಲ್ಲಿ ಗೆಲವು ನಂದೇ ಅಂದ್ರು ಸಿದ್ರಾಮಣ್ಣ; ಸ್ವಾಮೀಜಿ ಆಶೀರ್ವಾದ ಪಡೆದ ಸೋಮಣ್ಣ!

ಜಿದ್ದಾಜಿದ್ದಿ ಕ್ಷೇತರವಾಗಿರುವ ವರುಣಾದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಕಣಕ್ಕಿಳಿದಿದ್ದಾರೆ.

ಮೈಸೂರು: ಜಿದ್ದಾಜಿದ್ದಿ ಕ್ಷೇತರವಾಗಿರುವ ವರುಣಾದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಕಣಕ್ಕಿಳಿದಿದ್ದಾರೆ. ಸಿದ್ದು ವಿರುದ್ಧ ವರುಣಾದಿಂದ ಪ್ರಬಲ ಲಿಂಗಾಯತ ನಾಯಕ ಸೋಮಣ್ಣ ಅವರನ್ನು ಕಣಕ್ಕಿಳಿದಿರುವುದರಿಂದ ಹೈವೋಲ್ಟೇಜ್ ಕಣವಾಗಿದೆ.

ಉಭಯ ನಾಯಕರು ಗುರುವಾರ ಮಠಗಳಿಗೆ ಭೇಟಿ ನೀಡಿದ್ದು, ತಮ್ಮ ಪಕ್ಷದ  ಹಿರಿಯ ನಾಯಕರನ್ನು ಭೇಟಿ ನೀಡಿದ್ದರು. ಸೋಮಣ್ಣ ಅವರು ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ನಂತರ ಹಿರಿಯ ಬಿಜೆಪಿ ನಾಯಕ ಮತ್ತು ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿದರು. ಶ್ರೀನಿವಾಸ ಪ್ರಸಾದ್ ಅವರನ್ನು ಸಿದ್ದರಾಮಯ್ಯನವರ ಪರಮ ಪ್ರತಿಸ್ಪರ್ಧಿ ಎಂದು ಪರಿಗಣಿಸಲಾಗಿದೆ.

ಸೋಮಣ್ಣ ಮತ್ತು ಶ್ರೀನಿವಾಸ ಪ್ರಸಾದ್ ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ತಂತ್ರಗಳನ್ನು ಅನುಸರಿಸಬೇಕು ಎಂದು ಚರ್ಚಿಸಿದರು ಎಂದು ತಿಳಿದುಬಂದಿದೆ. ಸೋಮಣ್ಣ ಅವರು ಜೆಎಸ್‌ಎಸ್ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಸಚಿವರು ವರುಣಾದ ಪ್ರಮುಖ ಪಕ್ಷದ ಮುಖಂಡರ ಜತೆಯೂ ಸಭೆ ನಡೆಸಿದರು. “ನಾನು ಏಪ್ರಿಲ್ 17 ರಂದು ನನ್ನ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದೇನೆ. ನಾನು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ನನ್ನೊಂದಿಗೆ ಬರಲು ಆಹ್ವಾನಿಸುತ್ತೇನೆ ಎಂದು ಹೇಳಿದರು. ಸೋಮಣ್ಣ ಕೂಡ ಕಾರ್ಯ ಗ್ರಾಮದಿಂದಲೇ ಪ್ರಚಾರ ಆರಂಭಿಸುವುದಾಗಿ ತಿಳಿಸಿದರು. ನನ್ನ ವಿರುದ್ಧ ಯಾರು ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಲ್ಲ ಎಂದರು.

ನಂತರ ಬಿಜೆಪಿ ಕಚೇರಿಯಲ್ಲಿ ಬಿ ಫಾರಂ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಡಬಲ್ ಇಂಜಿನ್ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕಲ್ಯಾಣ ಕಾರ್ಯಕ್ರಮಗಳು ಜನರಿಗೆ ತಲುಪಿವೆ. ಒಳಮೀಸಲಾತಿ ಕುರಿತ ಸದಾಶಿವ ಆಯೋಗದ ವರದಿ ದಶಕಗಳಿಂದ ಕಾಗದದಲ್ಲಿಯೇ ಉಳಿದಿತ್ತು. ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಕಾರ್ಯರೂಪಕ್ಕೆ ಬಂತು ಎಂದರು.

ಬೆಂಗಳೂರಿನ ಜನ ನನ್ನನ್ನು ಪಕ್ಷದ ಕಾರ್ಯಕರ್ತನಿಂದ ಮಂತ್ರಿವರೆಗೂ ಬೆಳೆಸಿದರು. ವರುಣಾ ಮತ್ತು ಚಾಮರಾಜನಗರದ ಮತದಾರರು ಸಹ ಅದೇ ಬೆಂಬಲವನ್ನು ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು  ಹೇಳಿದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ, ವರುಣಾದಿಂದ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಡಿ ಎಂದು  ಸೂಚಿಸಿಲ್ಲ ಎಂದರು. ವಿಜಯೇಂದ್ರ ಈಗ ಬಂದರೂ ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತೇನೆ,’’ ಎಂದರು.

ಇದೇ ವೇಳೆ ಕಾಂಗ್ರೆಸ್ ಸಿಎಂ ಹುದ್ದೆ ಆಕಾಂಕ್ಷಿ ಸಿದ್ದರಾಮಯ್ಯ ಚಾಮುಂಡೇಶ್ವರಿಯಿಂದ ಪ್ರಚಾರ ಆರಂಭಿಸಿದರು. 'ಜನರ ಬೆಂಬಲದಿಂದ ಗೆಲ್ಲುತ್ತೇನೆ. ನನ್ನ ವಿರುದ್ಧ ಸೋಮಣ್ಣ ಅಥವಾ ಯಾರಾದರೂ ಸ್ಪರ್ಧಿಸಲಿ... ಹಣಬಲ ನನ್ನ ಗೆಲುವನ್ನು ತಡೆಯಲು ಸಾಧ್ಯವಿಲ್ಲ. ವರುಣಾದ ಜನರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇರುವುದರಿಂದ ಎದುರಾಳಿಯ ಚಿಂತೆಯಿಲ್ಲ ಎಂದು ಮಾಜಿ ಸಿಎಂ ಹೇಳಿದರು.

ತಮ್ಮ ಪುತ್ರ ಡಾ.ಯತೀಂದ್ರ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಮುಗಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಎರಡನೇ ಸ್ಥಾನದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಲಿದೆ. ಅವಕಾಶ ನೀಡಿದರೆ ಕೋಲಾರದಿಂದ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ವರುಣಾದಲ್ಲಿಯೇ ಇದ್ದು ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಾದ್ಯಂತ ಪ್ರಚಾರ ಮಾಡಲಿರುವ ಸಿದ್ದರಾಮಯ್ಯ ಕೇವಲ ಒಂದು ದಿನದ ಮಟ್ಟಿಗೆ ವರುಣಾದಲ್ಲಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.ಸಿದ್ದರಾಮಯ್ಯ ಅವರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರೊಂದಿಗೆ  ಮಾತುಕತೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT