ಫೈಟರ್ ರವಿ 
ರಾಜಕೀಯ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರೌಡಿ ಶೀಟರ್ ಫೈಟರ್ ರವಿ ರಾಜೀನಾಮೆ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ರಾಜೀನಾಮೆ ನೀಡಿ, ಅನ್ಯ ಪಕ್ಷಗಳತ್ತ ಜಿಗಿಯುತ್ತಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ರಾಜೀನಾಮೆ ನೀಡಿ, ಅನ್ಯ ಪಕ್ಷಗಳತ್ತ ಜಿಗಿಯುತ್ತಿದ್ದಾರೆ.

ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ರೌಡಿಶೀಟರ್ ಫೈಟರ್ ರವಿ  ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ, ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದರು.

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಫೈಟರ್ ರವಿಗೆ ಟಿಕೆಟ್ ಪಕ್ಕ ಎಂಬ ಸಂದೇಶವನ್ನು ಸ್ವತಃ ಪಕ್ಷದ ರಾಜ್ಯಾಧ್ಯಕ್ಷರೇ ಹೇಳಿಕೆ ನೀಡಿದ್ದರು. ಆದರೆ ಇದೀಗ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಫೈಟರ್ ರವಿ  ಬಿಜೆಪಿಯಿಂದ ಹೊರ ನಡೆದಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್