ಸಂಗಣ್ಣ ಕರಡಿ 
ರಾಜಕೀಯ

ಬಿಜೆಪಿಯಲ್ಲಿ ರಾಜೀನಾಮೆ ಪರ್ವ: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ತೆನೆ ಕೈ ಹಿಡಿಯಲು ಮುಂದಾದ ಸಂಗಣ್ಣ ಕರಡಿ

ಚುನಾವಣೆ ಸಮೀಪದಲ್ಲೇ ಬಿಜೆಪಿಯಲ್ಲಿ ಬಂಡಾಯ ನಾಯಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಪಕ್ಷದಲ್ಲಿ ಮತ್ತೊಬ್ಬರು ರಾಜೀನಾಮೆಗೆ ಮುಂದಾಗಿದ್ದಾರೆ. 

ಕೊಪ್ಪಳ: ಚುನಾವಣೆ ಸಮೀಪದಲ್ಲೇ ಬಿಜೆಪಿಯಲ್ಲಿ ಬಂಡಾಯ ನಾಯಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಪಕ್ಷದಲ್ಲಿ ಮತ್ತೊಬ್ಬರು ರಾಜೀನಾಮೆಗೆ ಮುಂದಾಗಿದ್ದಾರೆ. 

ಸಂಗಣ್ಣ ಕರಡಿ ಅವರು ಕೊಪ್ಪಳ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಟಿಕೆಟ್ ಸಿಗದೇ ತೀವ್ರ ಅಸಮಧಾನಗೊಂಡಿದ್ದರು. ಇದೀಗ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಗೆ ತಯಾರಿ ನಡೆಸಿದ್ದಾರೆ.

ಸಂಸದರಿಗೆ ಟಿಕೆಟ್ ಇಲ್ಲ ಎಂದು ಹೇಳಿದ್ದ ಪಕ್ಷದ ವರಿಷ್ಠರ ಬಳಿ ತಮ್ಮ ಪುತ್ರ ಗವಿಸಿದ್ದಪ್ಪ ಕರಡಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಪುತ್ರನಿಗೂ ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಅಸಮಧಾನಗೊಂಡಿರುವ ಸಂಗಣ್ಣ ಇಂದು ಬೆಳಿಗ್ಗೆ 11 ಗಂಟೆಗೆ ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆ ಬಳಿಕ ಮುಂದಿನ ನಿರ್ಧಾರವನ್ನು ಅಧಿಕೃತವಾಗಿ ತಿಳಿಸಲಿದ್ದಾರೆ.

ಸಭೆಯ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಸಂಗಣ್ಣ ಕರಡಿಯವರು ನಾಳೆ ಲೋಕಸಭಾ ಸ್ಪೀಕರ್ ಗೆ ರಾಜೀನಾಮೆ ಪತ್ರ ಸಲ್ಲಿಸಿ ಏಪ್ರಿಲ್ 19 ರಂದು ಜೆಡಿಎಸ್‍ನಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!