ಜಗದೀಶ್ ಶೆಟ್ಟರ್ 
ರಾಜಕೀಯ

ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ನಿಶ್ಚಿತ, ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿಲ್ಲ: ಜಗದೀಶ್ ಶೆಟ್ಟರ್

ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿಗೆ ಇಂದು ಭಾನುವಾರ ರಾಜೀನಾಮೆ ನೀಡಲು ನಿಶ್ಚಯಿಸಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿ: ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿಗೆ ಇಂದು ಭಾನುವಾರ ರಾಜೀನಾಮೆ ನೀಡಲು ನಿಶ್ಚಯಿಸಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ನನ್ನ ಮುಂದಿನ ನಿರ್ಧಾರವನ್ನು ಈಗ ತೆಗೆದುಕೊಂಡಿಲ್ಲ, ಆದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಂತೂ ಖಂಡಿತ. ನನ್ನ ಕ್ಷೇತ್ರದ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳಿಂದ ಅಭಿಪ್ರಾಯ, ಸಲಹೆ ಪಡೆದು ಮುಂದಿನ ಹೆಜ್ಜೆ ಇಡುತ್ತೇನೆ ಎಂದಿದ್ದಾರೆ.

ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಹೋಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ರಾಜೀನಾಮೆ ಪತ್ರ ನೀಡಲಿದ್ದೇನೆ. ರಾಜೀನಾಮೆ ನೀಡಿದ ಬಳಿಕ ಹುಬ್ಬಳ್ಳಿಗೆ ವಾಪಸ್ಸಾಗಿ ಮುಂದಿನ ನಿರ್ಧಾರದ ಬಗ್ಗೆ ಯೋಚಿಸುತ್ತೇನೆ. ಕಾಂಗ್ರೆಸ್ ನಾಯಕರು ಇದುವರೆಗೆ ನನ್ನನ್ನು ಸಂಪರ್ಕಿಸಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel