ಜಗದೀಶ್ ಶೆಟ್ಟರ್ ಜತೆ ಕಾಂಗ್ರೆಸ್ ನಾಯಕರ ಮಾತುಕತೆ 
ರಾಜಕೀಯ

ನಾಳೆ ಬೆಳಗ್ಗೆ ರಾಹುಲ್ ಗಾಂಧಿ, ಖರ್ಗೆ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ ನಂತರ ಕೇಸರಿ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ನಾಯಕ...

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ ನಂತರ ಕೇಸರಿ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಗೆ ಕರೆತರಲು ಲಿಂಗಾಯಿತ ನಾಯಕರಾದ ಎಂಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಇಂದು ತಡ ರಾತ್ರಿಯವರೆಗೂ ಶಾಮನೂರ ಶಿವಶಂಕರಪ್ಪ ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಎಂಬಿ ಪಾಟೀಲ್ ಅವರು ಶೆಟ್ಟರ್ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು. ಕಾಂಗ್ರೆಸ್ ನಾಯಕರ ಮಾತುಕತೆ ಯಶಸ್ವಿಯಾಗಿದ್ದು, ನಾಳೆಯೇ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಶೆಟ್ಟರ್ ಅವರು ಕಾಂಗ್ರೆಸ್ ಸೇರಲು ಒಪ್ಪಿದ್ದು, ತಮ್ಮ ಜೊತೆ ಬರುವ ನಾಯಕರಿಗೂ ಸೂಕ್ತ ಸ್ಥಾನಮಾನ ನೀಡಬೇಕು, ಪಕ್ಷ ಅಧಿಕಾರಕ್ಕೆ ಬಂದರೆ ತಮ್ಮ ಗೌರವಕ್ಕೆ ತಕ್ಕ ಸ್ಥಾನಮಾನ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ