ರಾಹುಲ್ ಗಾಂಧಿ 
ರಾಜಕೀಯ

ಕನಿಷ್ಠ 150 ಸ್ಥಾನ ಗೆಲ್ಲಿ, ಇಲ್ಲದಿದ್ದರೆ ಬಿಜೆಪಿಯಿಂದ ಆಪರೇಷನ್ ಕಮಲ: ಕಾಂಗ್ರೆಸ್‌ ನಾಯಕರಿಗೆ ರಾಹುಲ್ ಟಾರ್ಗೆಟ್

ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಪ್ರಬಲ ಅಲೆ ಇದ್ದು, ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವಂತೆ...

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಪ್ರಬಲ ಅಲೆ ಇದ್ದು, ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ನಾಯಕರ ಮೇಲೆ ಒತ್ತಡ ಹೇರಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 150 ಸ್ಥಾನಗಳನ್ನು ಗೆಲ್ಲಬೇಕು. ಇಲ್ಲದಿದ್ದರೆ ಮುಂದಿನ ಸರ್ಕಾರವನ್ನು ಭ್ರಷ್ಟ ಬಿಜೆಪಿ "ಕಳ್ಳತನ" ಮಾಡುತ್ತದೆ ಎಂದು ರಾಹುಲ್ ಗಾಂಧಿ ಅವರು ಪಕ್ಷ ನಾಯಕರಿಗೆ ಹೇಳಿದ್ದಾರೆ.

ಎರಡು ದಿನಗಳ ಭೇಟಿಗಾಗಿ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿದ್ದು, ಕೋಲಾರ, ಬೆಂಗಳೂರು ಮತ್ತು ಬೀದರ್‌ನಲ್ಲಿ ಪಕ್ಷದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಇಂದಿರಾ ಗಾಂಧಿ ಭವನ ಉದ್ಘಾಟಿಸಿ ಮಾತನಾಡಿದ ರಾಹುಲ್ ಗಾಂಧಿ, ದ್ವೇಷ ಮತ್ತು ಹಿಂಸಾಚಾರ, ಸಂವಿಧಾನಾತ್ಮಕ ಸಂಸ್ಥೆಗಳ ಮೇಲಿನ ದಾಳಿಯ ವಿಷಯದಲ್ಲಿ ಬಿಜೆಪಿ ಏನು ಮಾಡುತ್ತಿದೆ ಎಂಬುದು ನಮ್ಮಲ್ಲಿ ಹೆಚ್ಚಿನವರಿಗೆ ತಿಳಿದಿದೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ ಎಂದರು.

ನಾವು ಈಗ ಕರ್ನಾಟಕದಲ್ಲಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಪ್ರಬಲ ಅಲೆ ಇರುವುದನ್ನು ನೋಡಿ ನನಗೆ ತುಂಬಾ ಸಂತೋಷವಾಗಿದೆ ಮತ್ತು ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video