ಬೆಂಗಳೂರು: ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಕಾಂಗ್ರೆಸ್ ಗೆ ವಿಶೇಷ ಹೆಚ್ಚಿನ ಶಕ್ತಿ ಬಲ ನೀಡಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ವಿಶೇಷ ಶಕ್ತಿ ಬರಲಿದೆ. ನಮ್ಮ ಪಕ್ಷದ ತತ್ವ, ಸಿದ್ಧಾಂತಗಳನ್ನು ಅರಿತುಕೊಂಡು ಒಪ್ಪಿಕೊಂಡು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವುದು ನಮಗೆ ಅತ್ಯಂತ ಸಂತೋಷ ತಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರ ಜೊತೆಗೆ ಹಲವು ನಾಯಕರು, ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಶೆಟ್ಟರ್ ಪಕ್ಷ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಹಾಯವಾಗಲಿದೆ. ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಚುನಾವಣೆಯಲ್ಲಿ 150 ಸ್ಥಾನ ಬರುವುದು ಖಾತ್ರಿಯಾಗಿದೆ ಎಂದರು.