ಅರವಿಂದ್ ಲಿಂಬಾವಳಿ-ರಾಮದಾಸ್ 
ರಾಜಕೀಯ

ಬಿಜೆಪಿ 3ನೇ ಪಟ್ಟಿ ಪ್ರಕಟ: ಲಿಂಬಾವಳಿ, ರಾಮದಾಸ್ ಗೆ ಕೈ ತಪ್ಪಿದ ಟಿಕೆಟ್

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. 

ಈ ಬಾರಿ ಅರವಿಂದ್ ಲಿಂಬಾವಳಿ ಬದಳಿಗೆ ಅವರ ಪತ್ನಿ ಮಂಜುಳ ಅರವಿಂದ್ ಲಿಂಬಾವಳಿ ಅವರಿಗೆ ಮಹದೇವಪುರದಿಂದ ಟಿಕೆಟ್ ನೀಡಲಾಗಿದೆ. ಇನ್ನು ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್ ಗೆ ಟಿಕೆಟ್ ಕೈತಪ್ಪಿದ್ದ ಶ್ರೀವತ್ಸ ಎಂಬುವರಿಗೆ ಟಿಕೆಟ್ ನೀಡಲಾಗಿದೆ.

ಇನ್ನು ಜಗದೀಶ್ ಶೆಟ್ಟರ್ ಪಕ್ಷ ಬಿಡಲು ಕಾರಣವಾದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಅನ್ನು ಮಹೇಶ್ ತೆಂಗಿನಕಾಯಿಗೆ ನೀಡಲಾಗಿದೆ. ಹೆಬ್ಬಾಳದಿಂದ ಕಟ್ಟಾ ಜಗದೀಶ್, ನಾಗ್ತಾನ್ ನಿಂದ ಸಂಜೀವ್ ಐಹೊಳೆ, ಸೆಡಂನಿಂದ ರಾಜಕುಮಾರ್ ಪಾಟೀಲ್, ಕೊಪ್ಪಳದಿಂದ ಮಂಜುಳಾ ಅಂಬರೀಶ್, ರೋಣಾದಿಂದ ಕಳಕಪ್ಪ ಬಂಡಿ, ಹಗರಿ ಬೊಮ್ಮನಹಳ್ಳಿಯಿಂದ ಬಿ. ರಾಮಣ್ಣ, ಗೋವಿಂದರಾಜನಗರದಿಂದ ಉಮೇಶ್ ಶೆಟ್ಟಿ ಹೆಸರು ಘೋಷಣೆಯಾಗಿದೆ. 

ಒಟ್ಟಾರೆ 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳ ಟಿಕೆಟ್ ಘೋಷಣೆಯಾಗಿದ್ದು ಇನ್ನು ಶಿವಮೊಗ್ಗ ನಗರ ಮತ್ತು ಮಾನ್ವಿ ಕ್ಷೇತ್ರದ ಟಿಕೆಟ್ ಘೋಷಣೆ ಬಾಕಿ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!