ಭವಾನಿ ರೇವಣ್ಣ 
ರಾಜಕೀಯ

ಎಲ್ಲಾ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ: ಭವಾನಿ ರೇವಣ್ಣ

ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಸದ್ದು ಮಾಡಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಜಿಲ್ಲೆಯ ಎಲ್ಲಾ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಸೋಮವಾರ...

ಹೊಳೆನರಸಿಪುರ: ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಸದ್ದು ಮಾಡಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಜಿಲ್ಲೆಯ ಎಲ್ಲಾ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಸೋಮವಾರ ಹೇಳಿದ್ದಾರೆ.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಾನೆ ಮತ್ತು ಎಲ್ಲಾ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು ಭವಾನಿ ರೇವಣ್ಣ ಅವರು ಹೇಳಿದ್ದಾರೆ.

ಕಳೆದ ಐದು ಚುನಾವಣೆಗಳಿಂದ ಹೊಳೆನರಸೀಪುರ ಕ್ಷೇತ್ರದ ಜನತೆ ಜೆಡಿಎಸ್ ಪಕ್ಷವನ್ನು ಬೆಂಬಲಿಸುತ್ತಿದ್ದು, ಈ ಚುನಾವಣೆಯಲ್ಲೂ ಅವರ ಬೆಂಬಲ ಸಿಗುವ ವಿಶ್ವಾಸವಿದೆ ಎಂದು ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳೇ ಪ್ರಮುಖವಾಗಿದ್ದು, ಕ್ಷೇತ್ರದಲ್ಲಿ ನೀರಾವರಿ, ಆರೋಗ್ಯ, ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಜನರಿಗೆ ಅರಿವಿದೆ ಎಂದರು.

ಇದಕ್ಕೂ ಮುನ್ನ ಎಚ್.ಡಿ.ರೇವಣ್ಣ ಅವರು ತಮ್ಮ ಪತ್ನಿ ಭವಾನಿ ಹಾಗೂ ಮಕ್ಕಳಾದ ಪ್ರಜ್ವಲ್ ಮತ್ತು ಸೂರಜ್ ಅವರೊಂದಿಗೆ ಹೊಳೆನರಸೀಪುರದ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, ಹರದನಹಳ್ಳಿಯ ದೇವೇಶ್ವರ ಮತ್ತು ದೇವಿರಮ್ಮ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು.

ಹಾಸನ ಜಿಲ್ಲೆಯಲ್ಲಿ ಇಂದು ನಾಲ್ವರು ಮಾಜಿ ಸಚಿವರಿಂದ ನಾಮಪತ್ರ ಸಲ್ಲಿಕೆ
ನಾಲ್ವರು ಮಾಜಿ ಸಚಿವರು ಹಾಸನ ಜಿಲ್ಲೆಯ ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಹೊಳೆನರಸೀಪುರ, ಅರಕಲಗೂಡು, ಸಕಲೇಶಪುರ ಮತ್ತು ಬೇಲೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಎ.ಮಂಜು, ಎಚ್.ಕೆ.ಕುಮಾರಸ್ವಾಮಿ ಮತ್ತು ಬಿ.ಶಿವರಾಂ ಅವರು ತಮ್ಮ ಅದೃಷ್ಟ ಪರೀಕ್ಷೆಗೆ ಉಮೇದುವಾರಿಕೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT