ಹುಬ್ಬಳ್ಳಿ: ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತ್ತೊಂದೆಡೆ ಪಕ್ಷಾಂತರ ಪರ್ವ ಸಹ ಜೋರಾಗಿದೆ. ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಂಸದ ಬಿವಿ ನಾಯಕ್ ಅವರು ಮಂಗಳವಾರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಬಿವಿ ನಾಯಕ್ ಅವರು ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಇದನ್ನು ಓದಿ: ಯಾರು ಯಾರ ಟಿಕೆಟ್ ನ್ನು ತಪ್ಪಿಸಿಲ್ಲ, ಎಲ್ಲವನ್ನೂ ಪರಿಶೀಲಿಸಿ ಹೈಕಮಾಂಡ್ ನಾಯಕರು ಟಿಕೆಟ್ ನೀಡಿದ್ದಾರೆ: ಸಿಎಂ ಬೊಮ್ಮಾಯಿ
ಬಿಜೆಪಿ ಮಾನ್ವಿಯಲ್ಲಿ ಬಿವಿ ನಾಯಕ್‌ಗೆ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಇದೇ ಕಾರಣಕ್ಕಾಗಿ ಬಿಜೆಪಿ ಈ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆ ಮಾಡಿಲ್ಲ ಎನ್ನಲಾಗುತ್ತಿದೆ.