ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ 
ರಾಜಕೀಯ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಶೆಟ್ರು: ಶಿಗ್ಗಾಂವಿಯಿಂದ ಸಿಎಂ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು?

ಕಾಂಗ್ರೆಸ್ ತನ್ನ 15 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ.  ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ತನ್ನ 15 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ.  ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಶಿಗ್ಗಾಂವಿಯಿಂದ ಸಿಎಂ ಬಸವರಾಜ ಬೊಮ್ಮಾಯಿ  ವಿರುದ್ಧ ಯಾರು ಕಣಕ್ಕಿಳಿಯುತ್ತಾರೆ ಎಂಬದು ತಿಳಿಯಲಿದೆ. ಶಿಗ್ಗಾಂವಿಯಿಂದ ಸಿಎಂ ಬಸವರಾಜ ಬೊಮ್ಮಾಯಿ  ವಿರುದ್ಧ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ತುದಿಗಾಲಲ್ಲಿ ನಿಂತಿದ್ದಾರೆ, ಆದರೆ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಲಿದೆ ಎಂಬುದು ಸದ್ಯದ ಕುತೂಹಲ.

ಪುಲಕೇಶಿನಗರ ಶಾಸಕ ಆರ್.ಅಖಂಡ ಶ್ರೀನಿವಾಸ್ ಮೂರ್ತಿ ಅವರು ಕಾಂಗ್ರೆಸ್ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಹೆಬ್ಬಾಳದ ಮಾಜಿ ಕಾರ್ಪೊರೇಟರ್ ಆನಂದ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

ಬಹು ಆಕಾಂಕ್ಷಿಗಳಿದ್ದ ಸಿ.ವಿ.ರಾಮನ್ ನಗರ, ರಾಯಚೂರು ನಗರ, ಶ್ರವಣಬೆಳಗೊಳ, ಅರಕಲಗೂಡು, ಲಿಂಗಸೂಗೂರು, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಮಂಗಳೂರು ಉತ್ತರ, ಶಿಡ್ಲಘಟ್ಟ, ಚಿಕ್ಕಮಗಳೂರು, ಕೆಆರ್ ಪುರಂ ಮತ್ತು ಹರಿಹರ ಕ್ಷೇತ್ರಗಳಿಗೂ ಇಂದೇ ಅಭ್ಯರ್ಥಿಗಳು ಘೋಷಣೆಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್