ಎಂಟಿಬಿ ನಾಗರಾಜ್ ಮತ್ತು ಶರತ್ ಬಚ್ಚೇಗೌಡ 
ರಾಜಕೀಯ

ಹೊಸಕೋಟೆ: ಎಂಟಿಬಿ ನಾಗರಾಜ್-ಶರತ್ ಬಚ್ಚೇಗೌಡ ಜಟಾಪಟಿ; ಅಭಿವೃದ್ಧಿ ಕಾರ್ಯಗಳ ಕ್ರೆಡಿಟ್ ಪಡೆಯಲು ಪೈಪೋಟಿ!

'ಸಂಸದ ಬಚ್ಚೇಗೌಡರು ತಾವರೆಕೆರೆಗೆ ಏನು ಅಭಿವೃದ್ಧಿ ಮಾಡಿದ್ದಾರೆ. ನಾನು ತಾವರೆಕೆರೆಯಲ್ಲಿ 5 ಕೋಟಿ ರೂ.ಗೂ ಹೆಚ್ಚು ಅಭಿವೃದ್ಧಿ ಮಾಡಿದ್ದೇನೆ ಎಂದರು.

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಶರತ್ ಬಚ್ಚೇಗೌಡ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ.

ತಾವರೆಕೆರೆಯಲ್ಲಿ ಸೋಮವಾರ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್ ಶರತ್ ಬಚ್ಚೇಗೌಡ ವಿರುದ್ಧ ಹರಿಹಾಯ್ದಿದ್ದಾರೆ. 'ಸಂಸದ ಬಚ್ಚೇಗೌಡರು ತಾವರೆಕೆರೆಗೆ ಏನು ಅಭಿವೃದ್ಧಿ ಮಾಡಿದ್ದಾರೆ. ನಾನು ತಾವರೆಕೆರೆಯಲ್ಲಿ 5 ಕೋಟಿ ರೂ.ಗೂ ಹೆಚ್ಚು ಅಭಿವೃದ್ಧಿ ಮಾಡಿದ್ದೇನೆ ಎಂದರು.

ಈ ಸಂಬಂಧ  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಶರತ್ ಬಚ್ಚೇಗೌಡ, ಸಚಿವ ಎಂಟಿಬಿ ನಾಗರಾಜ್ ಅವರು ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಇತಿಹಾಸವನ್ನು ಅಧ್ಯಯನ ಮಾಡಬೇಕು. ಹೊಸಕೋಟೆಗೆ ಡಿಗ್ರಿ ಕಾಲೇಜು ತಂದವರು ಬಿ.ಎನ್.ಬಚ್ಚೇಗೌಡರು. ಹೊಸಕೋಟೆಯ ಜನರಿಗೆ ಹಲವಾರು ಉದ್ಯೋಗಗಳನ್ನು ಸೃಷ್ಟಿಸಿದ ವೋಲ್ವೋ ಮತ್ತು ಡೈರಿ ಯೋಜನೆಯನ್ನು ಪಡೆಯುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಕಾಂಗ್ರೆಸ್ ಮಾಡಿದ್ದನ್ನು ಗೌರವಿಸದ ಪ್ರಧಾನಿ ನರೇಂದ್ರ ಮೋದಿಯಂತೆಯೇ ನಾಗರಾಜ್ ಅವರು ಕೂಡ ಬಚ್ಚೇಗೌಡರು ಮಾಡಿದ್ದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿದರು.

ಬಿ.ಎನ್.ಬಚ್ಚೇಗೌಡರು ಹೊಸಕೋಟೆಗೆ ಪಶು ಆಸ್ಪತ್ರೆ ತಂದರು. ರಾಜ್ಯದ ಸರಾಸರಿ ಪ್ರಕಾರ ಹೊಸಕೋಟೆಯಲ್ಲಿ ಏಳು ಪಿಎಚ್‌ಸಿಗಳು ಮಾತ್ರ ಇರಬೇಕು. ಆದರೆ ಬಚ್ಚೇಗೌಡರ ಕೃಪೆಯಿಂದ ಹೊಸಕೋಟೆಯಲ್ಲಿ 13 ಪಿಎಚ್‌ಸಿಗಳಿವೆ. ನಾಗರಾಜ್ ಮಾಡಿದ್ದನ್ನು ಯಾವ ಕಾರ್ಪೋರೇಟರ್ ಬೇಕಾದರೂ ಮಾಡಬಹುದು. ಶಾಶ್ವತ ಕುಡಿಯುವ ನೀರಿನ ಸೌಲಭ್ಯಗಳು ಮತ್ತು ಕಸ ಸುರಿಯುವಿಕೆಯ ಸಮಸ್ಯೆ ಇನ್ನೂ  ಬಗೆಹರರಿದಿಲ್ಲ ಎಂದು ಶರತ್ ಬಚ್ಚೇಗೌಡ ಆರೋಪಿಸಿದರು.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಎಂಟಿಬಿ ನಾಗರಾಜ್, ಗ್ಯಾರಂಟಿ ಕಾರ್ಡ್‌ಗಳನ್ನು ನೀಡುತ್ತಿರುವ ಕಾಂಗ್ರೆಸ್‌ಗೆ ಅಧಿಕಾರಕ್ಕೆ ಬರುವ ಯಾವುದೇ ಭರವಸೆ ಇಲ್ಲ, ಕಾವೇರಿ ಕುಡಿಯುವ ನೀರು, ಮೆಟ್ರೊ ರೈಲು ಸಂಪರ್ಕ ಕಲ್ಪಿಸಲು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವಂತೆ ಸರ್ಕಾರಕ್ಕೆ  ನಾನು ಒತ್ತಡ ಹೇರುತ್ತಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!