ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ ಹಾಗೂ ಸಿಎಂ ಬೊಮ್ಮಾಯಿ. 
ರಾಜಕೀಯ

ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ

ನಟ ಕಿಚ್ಚ ಸುದೀಪ್ ಅವರು ಮಂಗಳವಾರ ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಪರ ಪ್ರಚಾರ ಆರಂಭಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಚಿವರಾದ ಗೋವಿಂದ ಕಾರಜೋಳ ಮತ್ತು ಮುರುಗೇಶ್ ನಿರಾಣಿ ಅವರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಆಯೋಜಿಸಲಾದ ರೋಡ್ ಶೋನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಟ ಭಾಗವಹಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮಂಗಳವಾರ ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಪರ ಪ್ರಚಾರ ಆರಂಭಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾದ ಗೋವಿಂದ ಕಾರಜೋಳ ಮತ್ತು ಮುರುಗೇಶ್ ನಿರಾಣಿ ಅವರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಆಯೋಜಿಸಲಾದ ರೋಡ್ ಶೋನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಟ ಭಾಗವಹಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಬಾಗಲಕೋಟೆಯ ಮುಧೋಳ ಮೀಸಲು ಕ್ಷೇತ್ರದಿಂದ ಕಾರಜೋಳ ಹಾಗೂ ಬಿಳಗಿಯಿಂದ ನಿರಾಣಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಬೊಮ್ಮಾಯಿ ಮತ್ತು ಸುದೀಪ್ ಅವರು ವಿಶೇಷ ಹೆಲಿಕಾಪ್ಟರ್‌ನಲ್ಲಿ ಈಗಾಗಲೇ ಜಿಲ್ಲೆಗೆ ಆಗಮಿಸಿದ್ದಾರೆ.

ಈ ನಿಟ್ಟಿನಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಈಗಾಗಲೇ ಭಿತ್ತಿಪತ್ರ ಹಾಗೂ ವಿಶೇಷ ಆಹ್ವಾನ ಪತ್ರಿಕೆಗಳನ್ನು ಮಾಡಿದ್ದಾರೆ.

ಕಿಚ್ಚ ಸುದೀಪ್ ಅವರನ್ನು ಪ್ರಚಾರಕ್ಕೆ ಇಳಿಸುವ ಮೂಲಕ ಬಿಜೆಪಿ ಪಕ್ಷವು ಉತ್ತರ ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯದ ಮತದಾರರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. 

ಬಾಗಲಕೋಟೆಯಲ್ಲಿ 2.65 ಲಕ್ಷ ಎಸ್‌ಸಿ ಮತಗಳು ಮತ್ತು 1.25 ಲಕ್ಷ ಎಸ್‌ಟಿ ಮತಗಳಿವೆ. ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಿವೆ.

ದಕ್ಷಿಣ ಕರ್ನಾಟಕದಲ್ಲಿ ಕಿಚ್ಚ ಸುದೀಪ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೆಗಾ ಕಾರ್ಯಕ್ರಮವನ್ನು ಪಕ್ಷವು ಯೋಜಿಸುತ್ತಿದೆ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!