ಡಿ ಕೆ ಶಿವಕುಮಾರ್ 
ರಾಜಕೀಯ

ಡಿಕೆ ಶಿವಕುಮಾರ್ ಸಂಪತ್ತು 5 ವರ್ಷಗಳಲ್ಲಿ 573 ಕೋಟಿ ರೂ. ಹೆಚ್ಚಳ

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಅವಲಂಬಿತರ ಸಂಪತ್ತು ಕಳೆದ ಐದು ವರ್ಷಗಳಲ್ಲಿ 573 ಕೋಟಿ ರೂ. ಹೆಚ್ಚಳವಾಗಿದೆ. 

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಅವಲಂಬಿತರ ಸಂಪತ್ತು ಕಳೆದ ಐದು ವರ್ಷಗಳಲ್ಲಿ 573 ಕೋಟಿ ರೂ. ಹೆಚ್ಚಳವಾಗಿದೆ. 

2018 ರ ವಿಧಾನಸಭಾ ಚುನಾವಣೆ ವೇಳೆ ಒಟ್ಟು 840.08 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ಡಿಕೆ ಶಿವಕುಮಾರ್ ಅವರು ಘೋಷಿಸಿಕೊಂಡಿದ್ದರು. ಅದು 2023ರ ಚುನಾವಣೆಯಲ್ಲಿ 1,413.78 ಕೋಟಿಗೆ ಏರಿಕೆಯಾಗಿದೆ. ಡಿಕೆಶಿ ಕಳೆದ ಐದು ವರ್ಷಗಳಲ್ಲಿ ಶೇ. 68.29 ರಷ್ಟು ಹೆಚ್ಚಳವಾಗಿದೆ.

ಕನಕಪುರ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿರುವ ಡಿಕೆ ಶಿವಕುಮಾರ್ ಅವರು ಸೋಮವಾರ ನಾಮಪತ್ರ ಸಲ್ಲಿಸುವ ವೇಳೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಈ ಮಾಹಿತಿ ನೀಡಿದ್ದಾರೆ.

ಅಫಿಡವಿಟ್ ಪ್ರಕಾರ, ಡಿಕೆ ಶಿವಕುಮಾರ್ ಅವರು 251.69 ಕೋಟಿ ಮೌಲ್ಯದ ಚರ ಆಸ್ತಿಯನ್ನು ಹೊಂದಿದ್ದಾರೆ. ಇದರಲ್ಲಿ 6.75 ಕೋಟಿ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿಯು ಸೇರಿದೆ.

ಒಟ್ಟಾರೆಯಾಗಿ ಡಿಕೆಶಿ ಕುಟುಂಬ 273.42 ಕೋಟಿ ಮೌಲ್ಯದ ಚರ ಆಸ್ತಿಯನ್ನು ಹೊಂದಿದೆ. ಇದಲ್ಲದೆ,  ಅವರ ಕುಟುಂಬ ಒಟ್ಟು 1,140.36 ಕೋಟಿ ರೂ.ಮೌಲ್ಯದ ಸ್ಥಿರಾಸ್ತಿ ಹೊಂದಿದೆ.

ಆದಾಯ ತೆರಿಗೆಗೆ ಸಂಬಂಧಿಸಿದ ನಾಲ್ಕು ಪ್ರಕರಣ, ಜಾರಿ ನಿರ್ದೇಶನಾಲಯದ ಎರಡು ಪ್ರಕರಣ ಮತ್ತು ಒಂದು ಸಿಬಿಐ ಪ್ರಕರಣ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಒಟ್ಟು 19 ಪ್ರಕರಣಗಳು  ದಾಖಲಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಅವನನ್ನು ಹಾಳು ಮಾಡಿದ್ದೇ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್'!: ವೈಭವ್ ಸೂರ್ಯವಂಶಿ ಕುರಿತು ಗಂಭೀರ್‌ ವಿರುದ್ಧ ವಿಶ್ವಕಪ್‌ ವಿಜೇತ ಆಟಗಾರ ಕಿಡಿ

ಬಿಹಾರದ ಯುವಕನ ಜೊತೆ ಪ್ರೀತಿ, ಮದುವೆಗೆ ಸಿದ್ಧತೆ; ತಾಯಿ ಸಲಹೆ ಬೆನ್ನಲ್ಲೇ ನಿರ್ಧಾರ ಬದಲಿಸಿದ ಬೆಂಗಳೂರು ಟೆಕ್ಕಿ.. ಆಗಿದ್ದೇನು?