ರಾಜಕೀಯ

ಕರ್ನಾಟಕ ಚುನಾವಣೆ: ಪಿಎಸ್‌ಐ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೆ ಎಸ್ ಪಿ ಟಿಕೆಟ್! ನಾಮಪತ್ರ ಸಲ್ಲಿಕೆ

Nagaraja AB

ಕಲಬುರಗಿ: ಮೇ 10 ರಂದು ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ಕಿಂಗ್ ಪಿನ್ ಆರ್ .ಡಿ ಪಾಟೀಲ್ ಅಫಜಲಪುರ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. 

ಸದ್ಯ ಜೈಲಿನಲ್ಲಿರುವ ಪಾಟೀಲ್  ಸೋಮವಾರ ಪೊಲೀಸ್ ವಾಹನದಲ್ಲಿ ಆಗಮಿಸಿ ತಹಸೀಲ್ದಾರ್ ಕಚೇರಿಯಲ್ಲಿ  ನಾಮಪತ್ರ ಸಲ್ಲಿಸಿದರು. ಸಮಾಜವಾದಿ ಪಕ್ಷದಿಂದ ಎರಡು ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತೊಬ್ಬರು ನಾಮಪತ್ರ ಸಲ್ಲಿಸಿದ್ದರು. 39 ವರ್ಷದ ಪಾಟೀಲ್ ಚುನಾವಣಾ ಆಯೋಗಕ್ಕೆ 6.50 ಕೋಟಿ ಆಸ್ತಿ ಘೋಷಿಸಿದ್ದಾರೆ.

ಜನವರಿಯಲ್ಲಿ ಅವರು ನಾಪತ್ತೆಯಾದಾಗ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಘೋಷಿಸಿ ವಿಡಿಯೋ ಬಿಡುಗಡೆ ಮಾಡಿದ್ದರು. ಏಳು ನಿಮಿಷಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಜನರು ಬಯಸಿದರೆ, ನಾನು ಅಫ್ಜಲ್‌ಪುರ ಕ್ಷೇತ್ರದ ಅಭ್ಯರ್ಥಿಯಾಗುತ್ತೇನೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಅವರು ವೀಡಿಯೊದಲ್ಲಿ ಹೇಳಿದ್ದರು. 

ಕಲಬುರಗಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪಾಟೀಲ್ ವಿರುದ್ಧ ಸಿಐಡಿ ಪ್ರಕರಣ ದಾಖಲಿಸಿದೆ. ಅಧಿಕಾರಿಗಳು ಆತನನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಲು ಅವರ ನಿವಾಸಕ್ಕೆ ಹೋದಾಗ ಆರೋಪಿಗಳು ಅಧಿಕಾರಿಗಳನ್ನು ತಳ್ಳಿ ಸ್ಥಳದಿಂದ ಪರಾರಿಯಾಗಿದ್ದರು, ನಂತರ ಅವರನ್ನು ಬಂಧಿಸಲಾಯಿತು ಎಂದು ಸಿಐಡಿ ಹೇಳಿಕೆ ನೀಡಿದೆ.

SCROLL FOR NEXT