ರಾಜಕೀಯ

ಹಾಸನ: ಸ್ವರೂಪ್ ಬೆಂಬಲಕ್ಕೆ ನಿಂತ ರೇವಣ್ಣ, ಭವಾನಿ, ಪ್ರಜ್ವಲ್; ಬಿಜೆಪಿ ಅಭ್ಯರ್ಥಿಗೆ ಪಾಠ ಕಲಿಸಲು ಒಗ್ಗಟ್ಟಿನ ಸಂದೇಶ

Lingaraj Badiger

ಹಾಸನ: ಹಾಸನ ಜೆಡಿಎಸ್ ಟಿಕೆಟ್‌ ವಿಚಾರವಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಕುಟುಂಬದಲ್ಲಿ ನಡೆದಿದ್ದ ಒಂದು ತಿಂಗಳ ರಾಜಕೀಯ ಹೈಡ್ರಾಮಕ್ಕೆ ಕೊನೆಗೂ ಬುಧವಾರ ತೆರೆ ಬಿದ್ದಿದೆ.

ಹಾಸನದಲ್ಲಿ ಬಿಜೆಪಿ ಅಭ್ಯರ್ಥಿಗೆ ಪಾಠ ಕಲಿಸಲು ಮಾಜಿ ಸಚಿವ ಎಚ್ ಡಿ ರೇವಣ್ಣ, ಅವರ ಪತ್ನಿ ಭವಾನಿ ಹಾಗೂ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರು ಜೆಡಿಎಸ್ ಅಭ್ಯರ್ಥಿ ಎಚ್‌ಪಿ ಸ್ವರೂಪ್‌ ಬೆಂಬಲಕ್ಕೆ ನಿಂತಿದ್ದಾರೆ.

ಹಾಸನದಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮೊದಲ ಬಾರಿಗೆ ಜೆಡಿಎಸ್ ಮುಖಂಡರಾದ ಎಚ್.ಡಿ.ರೇವಣ್ಣ, ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರು ಹಾಸನ ಜೆಡಿಎಸ್ ಅಭ್ಯರ್ಥಿ ಎಚ್.ಪಿ.ಸ್ವರೂಪ್ ಪ್ರಕಾಶ್ ಅವರಿಗೆ ಬೆಂಬಲ ನೀಡುವ ಮೂಲಕ ಒಗ್ಗಟ್ಟಿನ ಸಂದೇಶ ರವಾನಿಸಿದರು.

ಹಾಸನ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಭವಾನಿ ರೇವಣ್ಣ ಅವರು, ಎಚ್.ಪಿ.ಸ್ವರೂಪ್ ನನ್ನ ಮಗನಿದ್ದಂತೆ ಎಂದು ಹೇಳಿದ್ದು, ಹಾಸನ ಕ್ಷೇತ್ರವನ್ನು ಮರಳಿ ಜೆಡಿಎಸ್ ತೆಕ್ಕೆಗೆ ಪಡೆಯಲು ನಮ್ಮ ಕುಟುಂಬ ಸದಸ್ಯರು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ.

ಪಕ್ಷಕ್ಕಿಂತ ಯಾವುದೇ ನಾಯಕರು ದೊಡ್ಡವರಲ್ಲ, ಪಕ್ಷದ ಹಿತದೃಷ್ಟಿಯಿಂದ ಹಿರಿಯ ನಾಯಕರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಭವಾನಿ ಹೇಳಿದರು.

ನಾನೇ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಎಚ್‌ಡಿ ದೇವೇಗೌಡ ಹಾಗೂ ಪಕ್ಷದ ಹಿತದೃಷ್ಟಿಯಿಂದ ಸ್ವರೂಪ್‌ಗೆ ಜೆಡಿಎಸ್ ಟಿಕೆಟ್ ನೀಡಬೇಕೆಂದು ಕೇಳಿಕೊಂಡಿದ್ದೆ ಎಂದು ಭವಾನಿ ಅವರು ಹೇಳಿದ್ದಾರೆ.

SCROLL FOR NEXT