ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ವರುಣಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ

Ramyashree GN

ಮೈಸೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಶಿಗ್ಗಾಂವಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕಾರಿಪುರದಿಂದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಈಗಾಗಲೇ ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದೆ.

ಈ ಹಿಂದೆ ಏಪ್ರಿಲ್ 7 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮುಂಬರುವ ಚುನಾವಣೆಯು ತಮ್ಮ ಕೊನೆಯ ಚುನಾವಣಾ ಯುದ್ಧವಾಗಿದ್ದು, ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಹೇಳಿದ್ದಾರೆ.

'ನನ್ನ ಹುಟ್ಟೂರು ಈ ಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ನಾನು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ' ಎಂದು ಸಿದ್ದರಾಮಯ್ಯ ಎಎನ್‌ಐಗೆ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ವಿವಿಧ ಪಕ್ಷಗಳ ಹಿರಿಯ ನಾಯಕರು ನಾಮಪತ್ರ ಸಲ್ಲಿಸುವ ಮೂಲಕ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿದೆ.

ಇದಕ್ಕೂ ಮುನ್ನ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಇತ್ತೀಚೆಗಷ್ಟೇ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನಾಮಪತ್ರ ಸಲ್ಲಿಸಿದರು.

ಜಗದೀಶ್ ಶೆಟ್ಟರ್ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದು ಒಂದು ವಾರದೊಳಗೆ ಕಾಂಗ್ರೆಸ್ ಸೇರಿದ ಲಿಂಗಾಯತ ಸಮುದಾಯದ ಎರಡನೇ ಹಿರಿಯ ನಾಯಕ. ಈ ಹಿಂದೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರಿದ್ದರು.

ಶೆಟ್ಟರ್ ಅವರು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರನ್ನು ಎದುರಿಸಲಿದ್ದಾರೆ.

ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆಜೆ ಜಾರ್ಜ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

SCROLL FOR NEXT