ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಪಕ್ಷದ ಉನ್ನತ ನಾಯಕರ ಗೌರವಿಸಲಿಲ್ಲ ಜಗದೀಶ್ ಶೆಟ್ಟರ್: ನಳಿನ್ ಕುಮಾರ್ ಕಟೀಲ್

ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನಿರ್ಗಮನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾರಣ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ ಉನ್ನತ ನಾಯಕರನ್ನೂ ಗೌರವಿಸಲಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.

ಮಂಗಳೂರು: ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನಿರ್ಗಮನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾರಣ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ ಉನ್ನತ ನಾಯಕರನ್ನೂ ಗೌರವಿಸಲಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಉನ್ನತ ನಾಯಕರು ಹುಬ್ಬಳ್ಳಿಯಲ್ಲಿರುವ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರೂ. ಆದರೆ, ಅವರನ್ನು ಶೆಟ್ಟರ್ ಗೌರವಿಸಲಿಲ್ಲ. ಪಕ್ಷ ತೊರೆಯದಂತೆ ಸಮಾಧಾನಪಡಿಸುವ ಪ್ರಯತ್ನ ಮಾಡಿದ್ದರೂ. ಆದರೆ, ಯಾರನ್ನೂ ಗೌರವಿಸದೆ ಪಕ್ಷ ತೊರೆದರು. ಬಿಜೆಪಿ ತೊರೆದು ಹೋಗಿರುವ ಶೆಟ್ಟರ್ ಅವರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ.

ಬಂಡಾಯದಿಂದ ನಾವು ವಿಚಲಿತರಾಗಿಲ್ಲ. ನಮ್ಮದು ಕೇಡರ್ ಆಧಾರಿತ ಪಕ್ಷ. ಚುನಾವಣೆ ಹತ್ತಿರವಿರುವಾಗ 70 ಹೊಸ ಮುಖಗಳನ್ನು ಕಣಕ್ಕಿಳಿಸಲು ಯಾರು ಧೈರ್ಯ ಮಾಡುತ್ತಾರೆ? ಎಂದು ಪ್ರಶ್ನಿಸಿದರು.

ಬಿಜೆಪಿಗೆ ಲಿಂಗಾಯತರ ಬೆಂಬಲದ ಕುರಿತು ಮಾತನಾಡಿ, “ಬಿಜೆಪಿಯಿಂದ ಮಾತ್ರ ಲಿಂಗಾಯತರನ್ನು ಸಿಎಂ ಮಾಡಲು ಸಾಧ್ಯ. ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿಗಳಿಲ್ಲ ಎಂದರು.

ಬಿಜೆಪಿ ಟಿಕೆಟ್ ಆಕಾಂಕ್ಷಿ ಅರುಣ್ ಕುಮಾರ್ ಪುತ್ತಿಲ ಬಂಡಾಯದ ಕುರಿತು ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಹೇಳಿದರು.

ಇತೇ ವೇಳೆ ಚುನಾಯಿತ ಪ್ರತಿನಿಧಿಗಳ ಕುಟುಂಬದ ಸದಸ್ಯರಿಗೆ ಬಿಜೆಪಿ ಟಿಕೆಟ್ ನೀಡುವುದನ್ನು ಕಟೀಲ್ ಅವರು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT