ರಾಜಕೀಯ

ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ? ಕಾಂಗ್ರೆಸ್ ಕಿಡಿ

Nagaraja AB

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ರಾಜಕೀಯ ಮುಖಂಡರ ನಡುವಿನ ಆರೋಪ, ಪ್ರತ್ಯಾರೋಪ, ವಾಕ್ಸಮರವೂ ಹೆಚ್ಚಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾವೇರಿಯ ಶಿಗ್ಗಾವಿ ಕ್ಷೇತ್ರದಲ್ಲಿ ನೀಡಿರುವ ಹೇಳಿಕೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ. 

ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು, ಮತ ಹಾಕದಿದ್ದರೆ ಮೋದಿ  ಆಶೀರ್ವಾದದಿಂದ ತಪ್ಪಿಸಿಕೊಳ್ಳುವರಿ ಎಂಬ ನಡ್ಡಾ ಹೇಳಿಕೆ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬೆದರಿಕೆ ಹಾಕಿದ ಜೆಪಿ ನಡ್ಡಾ ಅವರೇ, ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ?ಎಂದು ಪ್ರಶ್ನಿಸಿದೆ. ಕನ್ನಡಿಗರ ತೆರಿಗೆ ಭಿಕ್ಷೆಯಲ್ಲಿ ಗತ್ತು, ಗಮ್ಮತ್ತು, ಶೋಕಿ ಮಾಡುತ್ತಿರುವ ಮೋದಿಯೇ ಕನ್ನಡಿಗರ ಋಣಿಯಾಗಿರಬೇಕು ಅಲ್ಲವೇ ಎಂದು ಹೇಳಿದೆ. 

ಕರ್ನಾಟಕ ನೆರೆಯಲ್ಲಿ ಮುಳುಗಿದ್ದಾಗ ಮೋದಿ, ಇತ್ತ ತಿರುಗಿಯೂ ನೋಡಲಿಲ್ಲ, ಪರಿಹಾರವನ್ನೂ ನೀಡಲಿಲ್ಲ.  ನೆರೆ ಪರಿಹಾರಕ್ಕೆ ಬೇಡಿಕೆ ಸಲ್ಲಿಸಲು ಬಿಎಸ್ ಯಡಿಯೂರಪ್ಪ ಅವರು ಹಲವು ಬಾರಿ ದೆಹಲಿಯ ಪ್ರಧಾನಿ ಕಚೇರಿಯ ಬಾಗಿಲು ಕಾದರೂ ಕನಿಷ್ಠ ಸೌಜನ್ಯಕ್ಕೆ ಭೇಟಿಯೂ ಮಾಡಲಿಲ್ಲ. ಆಗ "ಮೋದಿ ಆಶೀರ್ವಾದ" ಎಲ್ಲಿ ಹೋಗಿತ್ತು ಎಂದು ಜೆ.ಪಿ. ನಡ್ಡಾ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ರಾಜ್ಯದ ಜನರನ್ನು ಬಿಜೆಪಿ ಅವಮಾನಿಸಿದೆ ಎಂದು ಆರೋಪಿಸಿದೆ. 

SCROLL FOR NEXT