ಅಜಿತ್ ಪವಾರ್ 
ರಾಜಕೀಯ

ಎನ್ ಸಿಪಿ ಕರ್ನಾಟಕ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅಜಿತ್ ಪವಾರ್ ಔಟ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ) ಶುಕ್ರವಾರ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಅಜಿತ್ ಪವಾರ್ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ) ಶುಕ್ರವಾರ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಅಜಿತ್ ಪವಾರ್ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಅಜಿತ್ ಪವಾರ್ ಅವರು ಎನ್ ಸಿಪಿಯಿಂದ ಹೊರಬರುವ ಊಹಾಪೋಹಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದರೂ ಸಹ ಗುರುವಾರ ಮುಂಬೈನಲ್ಲಿ ನಡೆದ ಪಕ್ಷದ ಸಭೆಗೆ ಗೈರು ಆಗಿದ್ದರು.

ಎನ್ ಸಿಪಿ ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ 15 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಪಕ್ಷದ ಮುಖ್ಯಸ್ಥ ಶರದ್ ಪವಾರ್, ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್, ಶಿವಾಜಿರಾವ್ ಗಾರ್ಜೆ, ಕ್ಲೈಡ್ ಕ್ರಾಸ್ಟೊ ಮತ್ತು ಆರ್ ಹರಿ ಅವರು ಸ್ಥಾನ ಪಡೆದಿದ್ದಾರೆ. 

ಎನ್ ಸಿಪಿ ಕರ್ನಾಟಕ ಘಟಕದ ಮುಖ್ಯಸ್ಥರಾಗಿರುವ ಆರ್ ಹರಿ ಅವರು ಯಲಬುರ್ಗಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಎನ್‌ಸಿಪಿ ಒಂಬತ್ತು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ