ಸಿಎಂ ಬೊಮ್ಮಾಯಿ, ಡಿಕೆ ಶಿವಕುಮಾರ್ 
ರಾಜಕೀಯ

ಲಿಂಗಾಯತ ಧರ್ಮ ಒಡೆಯುವ ಮತ್ತೊಂದು ಹುನ್ನಾರ ಡಿಕೆಶಿ ಹೇಳಿಕೆಯಿಂದ ಬಯಲು: ಸಿಎಂ ಬೊಮ್ಮಾಯಿ

ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಮಾತಿನ ಸಮರವೂ ಜೋರಾಗಿದೆ. ಕೆಲವು ಬಿಜೆಪಿಯ ಲಿಂಗಾಯತ ನಾಯಕರು ಕಾಂಗ್ರೆಸ್​ ಸೇರ್ಪಡೆಯಾಗಿರುವುದನ್ನು ಡ್ಯಾಂಗೆ ಹೋಲಿಸಿ ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಮಾತಿನ ಸಮರವೂ ಜೋರಾಗಿದೆ. ಕೆಲವು ಬಿಜೆಪಿಯ ಲಿಂಗಾಯತ ನಾಯಕರು ಕಾಂಗ್ರೆಸ್​ ಸೇರ್ಪಡೆಯಾಗಿರುವುದನ್ನು ಡ್ಯಾಂಗೆ ಹೋಲಿಸಿ ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

 ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ, ಡಿಕೆ ಶಿವಕುಮಾರ್  ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ ಎಂದು ಆರೋಪಿಸಿದ್ದಾರೆ.

‘ಡಿಕೆ ಶಿವಕುಮಾರ್ ಅವರೇ, ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂಬ ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ. 2018ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ? ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13ಕ್ಕೆ ಯಾರಯಾರ ಡ್ಯಾಮ್​ನಲ್ಲಿ ಎಷ್ಟು ನೀರಿದೆ ಅಂತ ಗೊತ್ತಾಗುತ್ತದೆ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ’ ಎಂದು ಬೊಮ್ಮಾಯಿ ಅವರು ಟ್ವೀಟ್​​ನಲ್ಲಿ ವಾಗ್ದಾಳಿ ನಡೆಸಿದ್ದಾರೆ. 

ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್, ಡ್ಯಾಂ ಒಡೆದರೆ ಹರಿದು ಹೋಗುವ ನೀರನ್ನು ತಡೆ ಹಿಡಿಯಲಾಗದು. ಮತ್ತೆ ಹೊಸದಾಗಿ ಡ್ಯಾಂ ಕಟ್ಟಬೇಕಷ್ಟೆ. ಡ್ಯಾಂ ಒಡೆದು ಹರಿದುಹೋಗುವ ನೀರು ಸಮುದ್ರ ಸೇರಲೇಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ