ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಕುಟುಂಬಸ್ಥರೇ ಟಾಪ್!

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದೀಗ ಜೆಡಿಎಸ್ ಪಕ್ಷದಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದೀಗ ಜೆಡಿಎಸ್ ಪಕ್ಷದಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ.

ಈ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಇದ್ದು, ಕುಟುಂಬಸ್ಥರೇ ಹೆಚ್ಚಾಗಿರುವುದು ಕಂಡು ಬಂದಿದೆ. ಪಟ್ಟಿಯಲ್ಲಿ ದೇವೇಗೌಡರ ಕುಟುಂಬದ 7 ಮಂದಿ ಸದಸ್ಯರು ಇರುವುದು ಕಂಡು ಬಂದಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಅವರ ಪತ್ನಿ ಭವಾನಿ ರೇವಣ್ಣ, ಅವರ ಪುತ್ರ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ಟಾರ್ ಪ್ರಚಾರಕರಾಗಿದ್ದಾರೆ.

ಇವರಲ್ಲದೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕುಪೇಂದ್ರ ರೆಡ್ಡಿ, ಟಿ.ಎ ಶರವಣ, ತಿಪ್ಪೇಸ್ವಾಮಿ, ಭೋಜೇಗೌಡ, ಬಿ.ಎಂ ಫಾರೂಖ್, ಅಪ್ಪಾಜಿ ಗೌಡ, ಜಪ್ರುಲ್ಲಾ ಖಾನ್ ಹಾಗೂ ನಜ್ಮಾ ನಜೀರ್ ಸೇರಿದಂತೆ ಇತರರು ಪಟ್ಟಿಯಲ್ಲಿ ಇದ್ದಾರೆ.

ಸ್ಟಾರ್ ಪ್ರಚಾರಕರ ಪಟ್ಟಿಯೊಂದಿಗೆ ಜೆಡಿಎಸ್ ತನ್ನ 13 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನೂ ಕೂಡ ಪ್ರಕಟಿಸಿದೆ.

ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಗುರುವಾರ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಹಾಗೂ ಮಂಗಳೂರು ನಗರ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ತೊರೆದಿದ್ದ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರನ್ನು ಕಣಕ್ಕಿಳಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿಯಲ್ಲಿ ಪಕ್ಷವು ಶಶಿಧರ್ ಸಿ ಯಲಿಗಾರ ಅವರನ್ನು ಕಣಕ್ಕಿಳಿಸಿದೆ.

ವಿಜಯನಗರ, ಬಳ್ಳಾರಿ ಗ್ರಾಮಾಂತರ, ದಾವಣಗೆರೆ ಉತ್ತರ, ಶಿಕಾರಿಪುರ, ತರೀಕೆರೆ ಮತ್ತು ಹೊಸಕೋಟೆ ಆರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆಗಿಳಿಯುತ್ತಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT