ಮೈಸೂರು: ಜಿದ್ದಾಜಿದ್ದಿನ ಕಣವೆಂದೆ ಬಿಂಬಿತವಾಗಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ್ತು ಸೋಮಣ್ಣ ಈಗಾಗಲೇ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.
ವರುಣಾದಲ್ಲೇ ಚುನಾವಣೆ ನಿಲ್ಲುವುದಾಗಿಯೂ ಹಾಗೂ ನಾಮಪತ್ರ ಸಲ್ಲಿಸಲಷ್ಟೇ ಬರುತ್ತೇನೆ ಎಂದು ಹೇಳಿಹೋಗಿದ್ದ ಸಿದ್ದರಾಮಯ್ಯನವರು ಸೋಮಣ್ಣನವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ನಾಮಪತ್ರ ಸಲ್ಲಿಸಲು 2 ದಿನ ಮೊದಲೇ ಓಡಿಬಂದರು.
ಇದನ್ನೂ ಓದಿ: ವರುಣಾದಲ್ಲಿ ಪ್ರಚಾರ ಮಾಡಲ್ಲ ಎಂದಿದ್ದ ಸಿದ್ದುರನ್ನು ಕ್ಷೇತ್ರದತ್ತ ಕರೆತಂದ ಸೋಮಣ್ಣ-ಬಿಜೆಪಿ ಪ್ರಚಾರ ತಂತ್ರ
ಇವತ್ತು ಮತ್ತೆ ಬಂದಿದ್ದಾರೆ, ಮುಂದಿನವಾರ ಇಲ್ಲೇ ಇರುತ್ತಾರಂತೆ! ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆ! ಎಂದು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯನವರ ಕಾಲೆಳೆದಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಅವರ ವರುಣಾ ಪ್ರವಾಸದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದಾರೆ.