ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 
ರಾಜಕೀಯ

ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡು ಒಗ್ಗಟ್ಟಿನ ಸಂದೇಶ ರವಾನಿಸಿದ ಡಿಕೆಶಿ, ಸಿದ್ದು!

ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಣ ಬಣ ರಾಜಕೀಯ ಆಗಾಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆ, ಪ್ರಚಾರ, ಪಕ್ಷ ಸಂಘಟನೆ ಮತ್ತಿತರ ಎಲ್ಲಾ ಕಾರ್ಯಗಳಲ್ಲೂ ಈ ಇಬ್ಬರೂ ನಾಯಕರ ಪಾತ್ರ ಮಹತ್ವದ್ದಾಗಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಣ ಬಣ ರಾಜಕೀಯ ಆಗಾಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆ, ಪ್ರಚಾರ, ಪಕ್ಷ ಸಂಘಟನೆ ಮತ್ತಿತರ ಎಲ್ಲಾ ಕಾರ್ಯಗಳಲ್ಲೂ ಈ  ನಾಯಕರ ಪಾತ್ರ ಮಹತ್ವದ್ದಾಗಿದೆ.

 ಈ ಇಬ್ಬರೂ ನಾಯಕರು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳಾಗಿದ್ದು, ಈ ವಿಚಾರದಲ್ಲೂ ಪೈಪೋಟಿಯುಕ್ತ ಮಾತುಗಳು ಕೇಳಿ ಬರುತ್ತಿರುತ್ತದೆ. ಬಿಜೆಪಿ ಹಾಗೂ ಜೆಡಿಎಸ್  ಕೂಡಾ ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಆಗಿಂದ್ದಾಗೆ ಟೀಕಾ ಪ್ರಹಾರ ನಡೆಸುತ್ತವೆ.

ಇದೀಗ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಈ ಇಬ್ಬರೂ ನಾಯಕರು ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡು ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ. ಈ ಫೋಟೋವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ವಿರೋಧಿಗಳು ಅದೆಷ್ಟೇ ಅಪಪ್ರಚಾರ ಮಾಡಬಹುದು, ಆದರೆ ಕಾಂಗ್ರೆಸ್ ಪಕ್ಷಕ್ಕೆ ಐಕ್ಯತೆ, ಏಕತೆ, ಒಗ್ಗಟ್ಟುಗಳೇ ಶಕ್ತಿ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್  ಶಕ್ತಿಯೇ ವಿರೋಧಿಗಳ ನಿದ್ದೆಗೆಡಿಸಿದೆ. ಮುಂದೆ ಶಾಶ್ವತವಾಗಿ ನಿದ್ದೆಗೆಡಿಸಲಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT